ಪೊನ್ನಂಪೇಟೆ, ಜೂ. ೨೭: ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ ಮಲ್ಲಂಗಡ ಕಾರ್ಯಪ್ಪ (೭೭) ಎಂಬವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹರಿಹರ ಗ್ರಾಮದಿಂದ ಬೆಳ್ಳೂರು ರಸ್ತೆಗೆ ತೆರಳುವ ರಸ್ತೆಯಲ್ಲಿರುವ ಬಸ್ ತಂಗುದಾಣದಲ್ಲಿ ವಿಷಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.