ಸಿದ್ದಾಪುರ, ಜೂ. ೨೮: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿದ ಮಳೆಗೆ ಕಾವೇರಿ ನದಿಯು ತುಂಬಿ ಹರಿಯುತ್ತಿದೆ. ನದಿ ತೀರಗಳಲ್ಲಿ ಪ್ರವಾಹದ ಭೀತಿ ಎದುರಾ ಗಿರುವ ಹಿನ್ನೆಲೆಯಲ್ಲಿ ಕುಶಾಲನಗರ ತಾಲೂಕು ತಹಶೀಲ್ದಾರ್ ರವರ ಆದೇಶದಂತೆ ನೆಲ್ಯಹುದಿಕೇರಿ ಗ್ರಾಮ ವ್ಯಾಪ್ತಿಯ ನದಿ ತೀರ ಪ್ರದೇಶಗಳಾದ ಬೆಟ್ಟದಕಾಡು, ಕುಂಬಾರಗುAಡಿ, ನಲ್ವತ್ತೇಕರೆಯ ನದಿ ತೀರದ ನಿವಾಸಿಗಳನ್ನು ಭೇಟಿ ನೀಡಿ ಪ್ರವಾಹ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಹಾಗೂ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನೋಟಿಸ್ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ ಸಚಿನ್ ಹಾಜರಿದ್ದರು.