ಮಡಿಕೇರಿ, ಜೂ. ೨೮ : ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದÀ ನೇರ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೊರಬೇಕು ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ಎಸ್‌ಟಿ ಮೋರ್ಚಾ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‌ಟಿ ಮೋರ್ಚಾದ ಪ್ರಮುಖರು, ಮಾಜಿ ಶಾಸಕರುಗಳು, ಬಿಜೆಪಿ ಪದಾಧಿಕಾರಿ ಗಳು ಹಾಗೂ ಕಾರ್ಯಕರ್ತರು ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸ ಬೇಕು ಎಂದು ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ವೀರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ತನಿಖೆಯನ್ನು ವಿಳಂಬ ಮಾಡುತ್ತಿದೆ. ಆರೋಪ ಎದುರಿಸುತ್ತಿರುವ ಮಾಜಿ ಸಚಿವ ನಾಗೇಂದ್ರ ಅವರÀ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಅಧಿಕಾರಿಗಳನ್ನು ಹೊಣೆ ಮಾಡಿ ತನಿಖೆ ನಡೆಸಲಾಗುತ್ತಿದೆ. ಇದು ಹಗರಣವನ್ನು ಮುಚ್ಚಿ ಹಾಕುವ ಹುನ್ನಾರವಾಗಿದೆ ಎಂದು ಟೀಕಿಸಿದರು.

ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಹಗರಣ ಒಂದೂವರೆ

(ಮೊದಲ ಪುಟದಿಂದ) ವರ್ಷದಲ್ಲೇ ಒಂದೊAದಾಗಿ ಹೊರಗೆ ಬರುತ್ತಿದೆ. ಕಾಂಗ್ರೆಸ್ ನಮಗೆ ಆಧಾರ ಎಂದು ನಂಬಿ ಹೆಚ್ಚು ಮತ ನೀಡಿದ ವರ್ಗದ ಜನರಿಗೆ ಅನ್ಯಾಯ ಆಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ವಾಲ್ಮೀಕಿ ನಿಗಮದ ರೂ.೧೮೭ ಕೋಟಿ ಹಣವನ್ನು ಬೇರೆ ಬೇರೆ ಬೋಗಸ್ ಖಾತೆ ಮೂಲಕ ತೆಲಂಗಾಣ ಚುನಾವಣೆಗೆ ಖರ್ಚು ಮಾಡಲಾಗಿದೆ. ಇದು ದೊಡ್ಡ ಭ್ರಷ್ಟಾಚಾರವಾಗಿದೆ, ಕೇಂದ್ರ ಸರ್ಕಾರದ ಅನುದಾನವೂ ನಿಗಮದಲ್ಲಿದೆ. ಪ್ರಕರಣ ಹೊರಗೆ ಬಂದ ನಂತರ ಅಧಿಕಾರಿಗಳನ್ನು ಮಾತ್ರ ತನಿಖೆಗೆ ಒಳಪಡಿಸಲಾಗಿದೆ. ಈ ಪೈಕಿ ವಿಚಾರಣೆ ಎದುರಿಸುತ್ತಿರುವ ಅಧಿಕಾರಿಯೋರ್ವರು ತಮಗೆ ಜೀವ ಬೆದರಿಕೆ ಹಾಕುತ್ತಿರುವ ಬಗ್ಗೆ ನ್ಯಾಯಾಧೀಶರ ಎದುರೇ ಹೇಳಿಕೊಂಡಿದ್ದಾರೆ. ಹೀಗಾದರೆ ಅಧಿಕಾರಿಗಳು ಕೆಲಸ ಮಾಡುವುದಾದರೂ ಹೇಗೇ ಎಂದು ಪ್ರಶ್ನಿಸಿದರು. ಪ್ರಕರಣಕ್ಕೆ ಸಂಬAಧಿಸಿದAತೆ ಬಿಜೆಪಿ ಹೋರಾಟ ಆರಂಭಿಸಿದ ನಂತರ ಸಚಿವ ನಾಗೇಂದ್ರ ರಾಜೀನಾಮೆ ನೀಡಿದಾರೆ. ಆದರೆ ಇಲ್ಲಿಯವರೆಗೆ ಸಚಿವರನ್ನು ವಿಚಾರಣೆಗೆ ಒಳಪಡಿಸಿಲ್ಲ, ದೊಡ್ಡ ದೊಡ್ಡ ವ್ಯಕ್ತಿಗಳು ಹಗರಣದಲ್ಲಿ ಭಾಗಿಗಳಾಗಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನದಲ್ಲಿದ್ದಾರೆ ಎಂದು ಬೋಪಯ್ಯ ಆರೋಪಿಸಿದರು.

ಕಾನೂನು ದುರುಪಯೋಗ

ರಾಜ್ಯ ಸರಕಾರ ಹಗರಣದಲ್ಲಿ ಮುಳುಗಿದ್ದು, ಇದನ್ನು ಪ್ರಶ್ನಿಸುವವರ, ಪ್ರತಿಭಟಿಸುವವರ ವಿರುದ್ಧ ಮೊಕದ್ದಮೆ ದಾಖಲಿಸಲಾಗುತ್ತಿದೆ. ಇದಕ್ಕೆ ಇತ್ತೀಚೆಗೆ ನಡೆದ ವೀರಾಜಪೇಟೆಯ ಪ್ರತಿಭಟನೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಏನಾದರೂ ಸರಕಾರದ ವಿರುದ್ಧದ ನೈಜಾಂಶವನ್ನು ಹಾಕಿದರೆ ಅವರ ಮೇಲೆ ಮೊಕದ್ದಮೆ ಹೂಡುವುದಲ್ಲದೆ, ಅವರ ಮೊಬೈಲ್ ವಶಪಡಿಸಿಕೊಳ್ಳುವಂತಹ ಕಾರ್ಯ ಆಗುತ್ತಿದೆ. ಆದರೆ ಬಿಜೆಪಿಯವರ ವಿರುದ್ಧ ಕೆಟ್ಟ ಪದಗಳಿಂದ ಬರೆದರೂ ಯಾವುದೇ ಕ್ರಮ ಆಗುತ್ತಿಲ್ಲ. ಕಾನೂನನ್ನೂ ಕೂಡ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಪೊಲೀಸರು ಏಕಪಕ್ಷೀಯವಾಗಿ ಕಾರ್ಯನಿರ್ವಹಿಸದೆ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಇದೇ ರೀತಿ ಮುಂದುವರೆದರೆ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆ ಎದುರು ಧರಣಿ ಹಮ್ಮಿಕೊಳ್ಳಲಾಗುವುದು. ಇದೀಗ ಮಳೆಗಾಲ ಕೂಡ ಆರಂಭವಾಗಿದ್ದು ಸುಮ್ಮನೆ ಸಮಸ್ಯೆಗಳನ್ನು ಹುಟ್ಟು ಹಾಕದಿರಿ ಎಂದು ಬೋಪಯ್ಯ ಎಚ್ಚರಿಸಿದರು.

ಬಿಜೆಪಿ ಸರಕಾರದ ಯೋಜನೆ

ಹಿಂದಿನ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಎಸ್‌ಟಿ ಸಮುದಾಯದ ಅಭಿವೃದ್ಧಿಗಾಗಿ ವಾಲ್ಮೀಕಿ ನಿಗಮ ಸ್ಥಾಪನೆ ಮಾಡಿತ್ತು. ಸಚಿವರನ್ನು ನೇಮಕ ಮಾಡಿ ಸಮುದಾಯದ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದರು. ಆದರೆ ಇಂದು ಕಾಂಗ್ರೆಸ್ ಸರ್ಕಾರದಲ್ಲಿ ಅಮಾಯಕರಿಗೆ ಅನ್ಯಾಯವಾಗುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಹೋರಾಟದಿಂದಲೇ ಬಂದಿರುವ ಬಿಜೆಪಿ ಇದರ ವಿರುದ್ಧ ನಿರಂತರ ಹೋರಾಟ ಮಾಡಲಿದೆ ಎಂದರು.

ಅನ್ಯಾಯ-ಅವ್ಯವಹಾರ

ಕಾAಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಪ್ರತಿನಿತ್ಯ ಅತ್ಯಾಚಾರ, ದರೋಡೆ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊಡಗು ಜಿಲ್ಲೆಯಲ್ಲಿಯೂ ಕೂಡ ಅಕ್ರಮ ಗೋ ಸಾಗಾಟ, ಮರಳು, ಕೆಂಪು ಕಲ್ಲು ಸಾಗಾಟ ದಂಧೆ ಹೆಚ್ಚಾಗಿದೆ. ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ಕ್ಲಬ್‌ಗಳಲ್ಲಿ ಇಸ್ಪೀಟ್ ದಂಧೆ ಶುರುವಾಗಿದ್ದು ಮಹಿಳೆಯರು ಕಣ್ಣೀರು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಜಿಲ್ಲಾಡಳಿತ ಕಡಿವಾಣ ಹಾಕುವುದರೊಂದಿಗೆ ಕಾನೂನನ್ನು ಬಿಗಿ ಮಾಡಬೇಕೆಂದು ಬೋಪಯ್ಯ ಜಿಲ್ಲಾಡಳಿತವನ್ನು ಆಗ್ರಹಿಸಿದರು.

ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಮಾತನಾಡಿ, ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು, ಎಸ್‌ಐಟಿ ತನಿಖೆ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನವಾಗುತ್ತಿದೆ. ಈ ಬಗ್ಗೆ ಸಿಬಿಐ ತನಿಖೆಯಾಗಬೇಕೆಂದು ಒತ್ತಾಯಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ರೈತರಿಗೆ ಇನ್ನಿಲ್ಲದ ತೊಂದರೆ ನೀಡುತ್ತಿದೆ. ಸ್ಟಾö್ಯಂಪ್ ಪೇಪರ್, ನೋಂದಣಿ ಶುಲ್ಕ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುವುದರೊಂದಿಗೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಇದರ ವಿರುದ್ದ ಬಿಜೆಪಿ ಹೋರಾಟ ಮಾಡಲಿದೆ ಎಂದು ಹೇಳಿದರು.

ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎA.ಪರಮೇಶ್ವರ ಮಾತನಾಡಿ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ಅವ್ಯವಹಾರದ ನೇರ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೊರಬೇಕು. ಈ ಬಗ್ಗೆ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಪರಿಶಿಷ್ಟರಿಗೆ ಅನ್ಯಾಯ ಮಾಡಿರುವುದರಿಂದ ಸರ್ಕಾರವನ್ನು ತಕ್ಷಣ ವಜಾಗೊಳಿಸಬೇಕು. ಆರ್ಥಿಕ ಇಲಾಖೆ ಮುಖ್ಯಮಂತ್ರಿಗಳ ಕೈಯಲ್ಲೇ ಇರುವುದರಿಂದ ಮುಖ್ಯಮಂತ್ರಿಗಳೇ ಖುದ್ದು ಈ ಹಗರಣದ ಹೊಣೆ ಹೊರಬೇಕು ಮತ್ತು ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು. ನಂತರ ಪರಮೇಶ್ವರ ಅವರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ.ಲೋಕೇಶ್, ವಕ್ತಾರ ಬಿ.ಕೆ.ಅರುಣ್ ಕುಮಾರ್, ಉಪಾಧ್ಯಕ್ಷ ಮನು ಮಂಜುನಾಥ್, ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ವೀರಾಜಪೇಟೆ ಅಧ್ಯಕ್ಷ ಸುವಿನ್ ಗಣಪತಿ, ಮಡಿಕೇರಿ ತಾಲೂಕು ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ರೈತ ಮೋರ್ಚಾ ಅಧ್ಯಕ್ಷ ಅಮ್ಮುಣಿಚಂಡ ರಂಜಿ ಪೂಣಚ್ಚ, ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಪದಾಧಿಕಾರಿಗಳಾದ ಶಿವಚಾಳಿಯಂಡ ಜಗದೀಶ್, ಶರತ್‌ಚಂದ್ರ, ಮಚ್ಚಂಡ ಪ್ರಕಾಶ್, ಅಪ್ಪಿ ಸುಬ್ರಮಣಿ, ಬಿಜೆಪಿ ಮಾಜಿ ಅಧ್ಯಕ್ಷ ಮಾಚಿಮಾಡ ರವೀಂದ್ರ, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ನಗರಸಭಾ ಸದಸ್ಯರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.