ಶನಿವಾರಸಂತೆ, ಜೂ. ೨೯: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ದೊಡ್ಡಕೊಡ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ.ಯ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೋಷಕರ ಸಮ್ಮುಖದಲ್ಲಿ ಜರುಗಿತು. ನಿಕಟಪೂರ್ವ ಅಧ್ಯಕ್ಷ ಕೆ.ಎ. ನಾಗೇಶ್ ಅವರ ಸ್ಥಾನ ತೆರವಾದ ಕಾರಣ ಹಾಜರಿದ್ದ ಪೋಷಕರ ಸಮ್ಮುಖದಲ್ಲಿ ನೂತನ ಅಧ್ಯಕ್ಷರಾಗಿ ಜಿ. ವಸಂತ್ ಹಾಗೂ ಉಪಾಧ್ಯಕ್ಷೆಯಾಗಿ ಮುಬೀನಾ ಆಯ್ಕೆಯಾದರು.

ನಂತರ ನಿಕಟಪೂರ್ವ ಅಧ್ಯಕ್ಷ ಕೆ.ಎ. ನಾಗೇಶ್ ಮಾತನಾಡಿ, ಶಾಲೆಯ ಸಮಗ್ರ ಅಭಿವೃದ್ಧಿಯ ಹಿನ್ನೆಲೆ ಶಾಲಾಭಿವೃದ್ಧಿ ಸಮಿತಿಯ ಪಾತ್ರ ಮಹತ್ವದಾಗಿದೆ ಎಂದರು. ನೂತನ ಅಧ್ಯಕ್ಷ ಜಿ. ವಸಂತ್ ಮಾತನಾಡಿ, ಸಮಿತಿಯ ಸರ್ವ ಸದಸ್ಯರು ಪರಸ್ಪರ ಸಹಕಾರದಿಂದ ಶಾಲೆಯ ಅಭಿವೃದ್ಧಿಗೆ ಶ್ರಮಿಸಿ ಉತ್ತಮ ಕಾರ್ಯ ನಿರ್ವಹಿಸೋಣ ಎಂದರು. ಕಾರ್ಯಕ್ರಮದಲ್ಲಿ ಉಡುಪಿಯ ಸಾರಿಗೆ ಇಲಾಖೆ ನಿವೃತ್ತ ಅಧೀಕ್ಷಕ ಶಿವಣ್ಣ ಶಾಲೆಯ ವಿದ್ಯಾರ್ಥಿಗಳಿಗೆ ಕೊಡುಗೆ ನೀಡಿದ ಸ್ವೆಟರ್ ಮತ್ತು ಟೋಪಿಯನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಹೆಚ್.ಎನ್. ಮಂಜುನಾಥ್ ಸಹ ಶಿಕ್ಷಕರಾದ ಮಹಮ್ಮದ್ ಫಯಾಜ್, ನವಮಿ, ಕೃಪಾ, ಲತಾ, ಚೈತ್ರ, ಲೇಖಾ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.