ಮಡಿಕೇರಿ, ಜೂ. ೨೯: ಪ್ರಸಕ್ತ ಸಾಲಿಗೆ ಮಡಿಕೇರಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಗೊಳಪಡುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ ೧೫ ಕೊನೆಯ ದಿನವಾಗಿದೆ. ಶೇ.೭೫ ಸ್ಥಾನಗಳು ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗ ಮತ್ತು ಉಳಿದ ಶೇ. ೨೫ ಸ್ಥಾನಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ೫ನೇ ತರಗತಿಯಿಂದ ೧೦ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ hಣಣಠಿs://sತಿ.ಞಚಿಡಿ.ಟಿiಛಿ.iಟಿ ಮೂಲಕ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಅರ್ಜಿಯೊಂದಿಗೆ ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ (SಂಖಿS Iಆಯೊಂದಿಗೆ) ಭಾವಚಿತ್ರ ಹಾಗೂ ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಸಂಬAಧಿಸಿದ ನಿಯಗಳ ವಾರ್ಡನ್‌ರವರಿಗೆ ಸಲ್ಲಿಸಬೇಕು.

ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಮಡಿಕೇರಿ ದೂರವಾಣಿ ಸಂಖ್ಯೆ: ೮೯೦೪೫೮೯೦೮೬, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಮಡಿಕೇರಿ ದೂರವಾಣಿ ಸಂಖ್ಯೆ: ೮೩೧೦೦೭೪೬೮೬, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಚೇರಂಬಾಣೆ ದೂರವಾಣಿ ಸಂಖ್ಯೆ: ೯೪೮೦೬೨೯೭೧೧ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂರವಾಣಿ ಸಂಖ್ಯೆ ೯೪೮೦೮೪೩೧೫೫ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.