ಮಡಿಕೇರಿ, ಜೂ. ೨೯: ವೀರಾಜಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ವೀರಾಜಪೇಟೆ ತಾಲೂಕು ಆಡಳಿತಾಧಿಕಾರಿಯಾದ ಜಿಂ.ಪA.ಉಪ ಕಾರ್ಯದರ್ಶಿ ಧನರಾಜ್ ನೇತೃತ್ವದಲ್ಲಿ ಸಾಮಾನ್ಯ ಸಭೆ ಜರುಗಿತು.
ತಾಲೂಕಿನಲ್ಲಿ ಡೆಂಗ್ಯೂ ಪ್ರಕಣಗಳು ಹೆಚ್ಚಾಗುತ್ತಿದ್ದು, ವೀರಾಜಪೇಟೆಯಲ್ಲಿ ೧೫, ಪೊನ್ನಂಪೇಟೆ ತಾಲೂಕಿನಲ್ಲಿ ೩೫ ಪ್ರಕಣಗಳು ಕಂಡುಬAದಿದ್ದು, ಡೆಂಗ್ಯೂ ತಡೆಗÀಟ್ಟಲು ಕ್ರಮವಹಿಸಿ ಎಂದು ಸೂಚಿಸಿದರು. ಡೆಂಗ್ಯೂ ನಿಂತ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಸೊಳ್ಳೆಗಳಿಂದ ಬರುತ್ತಿದ್ದು, ಸಾರ್ವಜನಿಕರು ಎಚ್ಚರವಹಿಸಿ ಸ್ಚಚ್ಚತೆಯನ್ನು ಕಾಪಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಕೃಷಿ ಇಲಾಖೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹಲವು ಸೌಲಭ್ಯಗಳಿದ್ದು, ಈ ಕುರಿತು ಅಭಿವೃದ್ದಿ ಸಾಧಿಸುವಂತೆ ಕೃಷಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪಶುಪಾಲನಾ ಇಲಾಖೆಯಿಂದ ಈಗಾಗಲೇ ಹಸುಗಳಿಗೆ ಕಾಲು-ಬಾಯಿ ಜ್ವರದ ಲಸಿಕೆಯನ್ನು ಶೇ ೯೩% ನೀಡಲಾಗಿದ್ದು, ಪ್ರಸ್ತುತ ಚರ್ಮಗಂಟು ರೋಗದ ಲಸಿಕೆ ನೀಡಲಾಗುತ್ತಿದೆ ಎಂದು ವೀರಾಜಪೇಟೆ ಪಶುಪಾಲನಾ ಸಹಾಯಕ ನಿರ್ದೇಶಕರಾದ ಡಾ.ನವೀನ್ ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿಗಳ ಕುರಿತು ಚರ್ಚಿಸಲಾಯಿತು. ಇಲಾಖೆಗಳ ಅಭಿವೃದ್ಧಿಗೆ ಶ್ರಮಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ವೀರಾಜ ಪೇಟೆ ತಾಲೂಕು ಪಂಚಾಯಿತಿ ಇ.ಒ. ಕೆ.ಸಿ.ಅಪ್ಪಣ್ಣ, ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.