ಸಿದ್ದಾಪುರ, ಜೂ. ೨೯: ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಕುಶಾಲನಗರ, ತಂಬಾಕು ನಿಯಂತ್ರಣ ಕೋಶ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನೆಲ್ಯಹುದಿಕೇರಿ ಪಟ್ಟಣದಲ್ಲಿ ಅಂಗಡಿ, ಹೋಟೆಲ್ ಮತ್ತು ಬಾರ್ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆಗಳ ದುಷ್ಪರಿಣಾಮಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಯಿತು. ಅಂಗಡಿಗಳಲ್ಲಿ ನಿಯಮ ಉಲ್ಲಂಘನೆಗೆ ಸಂಬAಧಿಸಿದAತೆ ದಂಡವನ್ನು ವಿಧಿಸಲಾಯಿತು. ಅಲ್ಲದೆ ಹೊಟೇಲ್, ಅಂಗಡಿ ಮತ್ತು ಬಾರ್ಗಳಲ್ಲಿ ಶುಚಿತ್ವದ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಆರೋಗ್ಯಾಧಿಕಾರಿ ಲೋಕೇಶ್, ಎನ್ಟಿಸಿಪಿ ತಂಡದ ಪುನೀತ ಮತ್ತು ಮಂಜುನಾಥ್ ಹಾಜರಿದ್ದರು.