ಮಡಿಕೇರಿ, ಜೂ. ೨೯: ರಾಜಾಸೀಟ್ ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೂರ್ಗ್ ವಿಲೇಜ್ ಅಭಿವೃದ್ಧಿ ಸಂಬAಧಿಸಿದAತೆ ಸುದೀರ್ಘ ಚರ್ಚೆ ನಡೆಯಿತು.
ರಾಜಾಸೀಟ್ ಪ್ರವೇಶ ದ್ವಾರದ ಟಿಕೆಟ್ ಕೌಂಟರ್ ಬಳಿ ಪ್ರವಾಸಿಗರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಸೆಲ್ಟರ್ ನಿರ್ಮಾಣ ಮಾಡುವ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ ರಾಜಾಸೀಟನ್ನು ಮತ್ತಷ್ಟು ಕಂಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರೇಟರ್ ರಾಜಾಸೀಟ್ ಅಭಿವೃದ್ಧಿ ಸಂಬAಧ ಬಾಕಿ ಇರುವ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆ ಅವರು ಹಸ್ತಾಂತರಿಸಬೇಕು. ಅಗತ್ಯ ಇರುವ ಕಡೆ ಲೈಟಿಂಗ್ ವ್ಯವಸ್ಥೆ ಮಾಡಬೇಕು. ನಗರಸಭೆಯಿಂದ ನೀರು ಸಂಪರ್ಕ ಪಡೆಯುವುದು ಸೇರಿದಂತೆ ಅಗತ್ಯ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಯೋಗೀಶ್ ಅವರು ರಾಜಾಸೀಟು, ಕೂರ್ಗ್ ವಿಲೇಜ್ ಅಭಿವೃದ್ಧಿ ಜೊತೆಗೆ ಗದ್ದಿಗೆ ಉದ್ಯಾನವನ ಹಾಗೂ ನೆಹರು ಮಂಟಪ ಅಭಿವೃದ್ಧಿಗೆ ಅಗತ್ಯ ಕ್ರಮವಹಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ರಾಜಾಸೀಟು ಉದ್ಯಾನವನ ನಿರ್ವಹಣೆ ಹಾಗೂ ಅಭಿವೃದ್ಧಿ ಸಂಬAಧ ಕ್ರಿಯಾಯೋಜನೆಗೆ ಸಭೆಯಲ್ಲಿ ಅನುಮೋದನೆ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಅವರು ರಾಜಾಸೀಟಿನಲ್ಲಿ ಜಿಲ್ಲೆಯ ಪ್ರವಾಸಿ ಸ್ಥಳಗಳ ಬಗ್ಗೆ ಎಲ್ಇಡಿ ಫಲಕ ಮೂಲಕ ಮಾಹಿತಿ ನೀಡುವಂತಾಗ ಬೇಕು ಎಂದು ಸಲಹೆ ನೀಡಿದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಸಹಾಯಕ ಇಂಜಿನಿಯರ್ ಸತೀಶ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್, ನಗರಸಭೆಯ ಪರಿಸರ ಇಂಜಿನಿಯರ್ ಸೌಮ್ಯ, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ ಅವರು ರಾಜಾಸೀಟು ಅಭಿವೃದ್ಧಿ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು.