ಮಡಿಕೇರಿ, ಜೂ. ೩೦: ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣವೊಂದಕ್ಕೆ ಸಂಬAಧಿಸಿದAತೆ ೨೩೨.೮ ಕೆ.ಜಿ. ಕರಿಮೆಣಸನ್ನು ಮಹಜರು ಮೂಲಕ ಅಮಾನತ್ತುಪಡಿಸಿಕೊಂಡು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ.

ಈ ಕರಿಮೆಣಸನ್ನು ಅರ್ಜಿದಾರರಾದ ಅಶ್ರಫ್ ಹಾಗೂ ಮಹಮ್ಮದ್ ಮುಸ್ತಾಕ್ ಎ.ಎಂ. ಎಂಬವರ ಸಮ್ಮುಖದಲ್ಲಿ ಮಾರಾಟ ಮಾಡಿ ಬಂದ ಹಣವನ್ನು ನ್ಯಾಯಾಲಯದಲ್ಲಿ ಜಮೆ ಮಾಡುವಂತೆ ಪೊನ್ನಂಪೇಟೆಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಈ ಕರಿಮೆಣಸನ್ನು ತಾ. ೪ ರಂದು ಬೆಳಿಗ್ಗೆ ೧೧ ಗಂಟೆಗೆ ಪೊನ್ನಂಪೇಟೆ ಠಾಣೆಯಲ್ಲಿ ಬಹಿರಂಗವಾಗಿ ಹರಾಜು ಪ್ರಕ್ರಿಯೆ ಮೂಲಕ ಮಾರಾಟ ಮಾಡಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.