ಮಡಿಕೇರಿ, ಜೂ. ೩೦: ಕಾಂಗ್ರೆಸ್ ಸರಕಾರದಿಂದ ಹಾಲಿನ ಬೆಲೆ ಏರಿಕೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿ ಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ನಾಪಂಡ ರವಿ ಕಾಳಪ್ಪ, ರೈತ ಮೋರ್ಚಾ ಬಿಜೆಪಿ ಕೊಡಗು ಜಿಲ್ಲಾಧ್ಯಕ್ಷರಾದ ಅಮ್ಮಣಿ ಚಂಡ ರಂಜಿ ಪೂಣಚ್ಚ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಳಾದ ಡಾಕ್ಟರ್ ಬಿ. ಸಿ. ನವೀನ್ ಕುಮಾರ್, ಕಾರ್ಯಕಾರಿಣಿ ಸದಸ್ಯೆ ಮಾಪಂಗಡ ಯಮುನಾ ಚಂಗಪ್ಪ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿವಚಾಳಿ ಯಂಡ ಜಗದೀಶ್, ಶರತ್ ಚಂದ್ರ, ಪ್ರಕಾಶ್, ಮಾಜಿ ಶಾಸಕರು ಸೇರಿದಂತೆ ಇತರ ಪ್ರಮುಖರು ಪಾಲ್ಗೊಂಡಿದ್ದರು.