ಮಡಿಕೇರಿ, ಜೂ. ೩೦: ಕೇಂದ್ರ ಸರ್ಕಾರದ ಆಲಿಮ್ಕೋ ಸಂಸ್ಥೆಯಿAದ ಅಡಿಪ್ ಯೋಜನೆಯಡಿ ವಿಶೇಷಚೇತನರಿಗೆ ಹಾಗೂ ರಾಷ್ಟಿçÃಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರು ಮೌಲ್ಯಮಾಪನ ತಪಾಸಣಾ ಶಿಬಿರಕ್ಕೆ ಹಾಜರಾಗಲು ತಾಲೂಕುವಾರು ದಿನಾಂಕಗಳನ್ನು ನಿಗದಿಪಡಿಸಲಾಗಿದೆ.

ಜುಲೈ ೨೬ ರಂದು ಕುಶಾಲನಗರ ತಾಲೂಕು ಕಲಾಮಂದಿರ ಅಥವಾ ಗಾಯತ್ರಿ ಕಲ್ಯಾಣ ಮಂಟಪ, ಜುಲೈ ೨೭ ರಂದು ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣ, ಜುಲೈ ೨೮ ರಂದು ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿಗೆ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರ ಹಾಗೂ ಜುಲೈ ೨೯ ಮತ್ತು ೩೦ ರಂದು ಮಡಿಕೇರಿ ತಾಲೂಕಿನ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಂಗಣ.

ಈ ದಿನಾಂಕಗಳAದು ಶಿಬಿರಗಳಲ್ಲಿ ಭಾಗವಹಿಸುವ ವಿಶೇಷಚೇತನರು ಯುಡಿಐಡಿ ಕಾರ್ಡ್, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ ಅಥವಾ ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಹಿರಿಯ ನಾಗರಿಕರ ಆಧಾರ್ ಕಾರ್ಡ್, ಹಿರಿಯ ನಾಗರಿಕರ ಗುರುತಿನ ಚೀಟಿ, ಆದಾಯ ಪ್ರಮಾಣಪತ್ರ ಅಥವಾ ಬಿಪಿಎಲ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ತರಬೇಕು. ಹೆಸರು ನೋಂದಾಯಿಸಿಕೊಳ್ಳಲು ಎಂಆರ್ ಡಬ್ಲುö್ಯಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ಹರೀಶ್ ಟಿ.ಆರ್. ಮೊ. ೮೮೬೧೪೨೮೯೩೧, ವೀರಾಜಪೇಟೆ ತಾಲೂಕಿನವರು ಪ್ರಥನ್‌ಕುಮಾರ್ ಸಿ.ಬಿ. ಮೊ. ೯೯೦೦೮೮೩೬೫೪ ಹಾಗೂ ಮಡಿಕೇರಿ ತಾಲೂಕಿನವರು ರಾಜೇಶ್ ಮೊ. ೮೦೭೩೧೯೨೯೧೪ ಹಾಗೂ ಹೆಚ್ಚಿನ ಮಾಹಿತಿಗೆ ಕಚೇರಿ ದೂ. ೦೮೨೭೨-೨೯೫೮೨೯ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ತಿಳಿಸಿದ್ದಾರೆ.