ವೀರಾಜಪೇಟೆ, ಜೂ. ೩೦: ಕಾಫಿ ತೋಟದÀಲ್ಲಿ ಒಂಟಿ ಸಲಗ ದಾಂಧಲೆ ನಡೆಸಿ ಅಪಾರ ಪ್ರಮಾಣದಲ್ಲಿ ಕೃಷಿ ಫಸಲು ನಾಶಗೊಳಿಸಿದ ಘಟನೆ ವೀರಾಜಪೇಟೆ ಒಂದನೇ ರುದ್ರಗುಪ್ಪೆ ಗ್ರಾಮದಲ್ಲಿ ನಡೆದಿದೆ.

ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ರುದ್ರಗುಪ್ಪೆ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗ ದಾಂಧಲೆ ನಡೆಸಿ ಗ್ರಾಮದ ಎ.ಹೆಚ್. ಸರಸ್ವತಿ ಮತ್ತು ಟೋಮಿ ಎಂಬವರಿಗೆ ಸೇರಿದ ತೋಟದಲ್ಲಿ ಕಾಫಿ ಗಿಡಗಳು ಸೇರಿದಂತೆ ತೆಂಗು, ಅಡಿಕೆ ಮತ್ತು ಬಾಳೆ ಗಿಡಗಳನ್ನು ಧ್ವಂಸ ಮಾಡಿದೆ. ಅಲ್ಲದೆ ವಿದ್ಯುತ್ ಪರಿವರ್ತಕದಿಂದ ಕೊಳವೆ ಬಾವಿಗೆ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿಯನ್ನು ತುಂಡರಿಸಿದೆ. ಪರಿಣಾಮ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಅಲ್ಲದೆ ವಿದ್ಯುತ್ ಪೂರೈಕೆಯಾಗುತ್ತಿರುವ ತಂತಿಯು ನೆಲೆದ ಮೇಲಿರುವ ಕಾರಣ ಕಾರ್ಮಿಕರು ಮತ್ತು ಇತರರು ಈ ಭಾಗಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಚೆಸ್ಕಾಂಗೆ ಈ ಸಂದರ್ಭ ಮಾಹಿತಿ ನೀಡಲಾಗಿದೆ.