ಪೊನ್ನಂಪೇಟೆ: ಕೊಡವ ಎಜುಕೇಷನ್ ಸೊಸೈಟಿಯ ಅಧೀನಕ್ಕೊಳಪಡುವ ಪೊನ್ನಂಪೇಟೆ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಪಿ.ಯು. ಕಾಲೇಜಿನಲ್ಲಿ ಅಂರ‍್ರಾಷ್ಟಿçÃಯ ಮಾದಕ ದ್ರವ್ಯ ವ್ಯಸನ ಮತ್ತು ಕಳ್ಳಸಾಗಣಿಕೆ ವಿರೋಧಿ ದಿನ ಆಚರಿಸಲಾಯಿತು.

ಸಿ.ಐ.ಟಿ. ಕಾಲೇಜಿನ ಬೇಸಿಕ್ ಸೈನ್ಸ್ ಮತ್ತು ಹ್ಯೂಮ್ಯಾನಿಟಿಸ್ ವಿಭಾಗ ಹಾಗೂ ಹೆಲ್ತ್ ಕಮಿಟಿ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಸಿ.ಐ.ಟಿ. ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಬಸವರಾಜು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಾದಕ ದ್ರವ್ಯ ವ್ಯಸನಕ್ಕೆ ಗುರಿಯಾಗುವವರ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಅನೇಕ ದುಷ್ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಇಂತಹ ದುಶ್ಚಟಗಳಿಗೆ ದಾಸರಾಗದೇ ಬದುಕು ಕಟ್ಟಿಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವೀರಾಜಪೇಟೆ ಡಿ.ವೈ.ಎಸ್.ಪಿ. ಮೋಹನ್ ಕುಮಾರ್ ಮಾತನಾಡಿ, ಯುವಕರು ಮಾದಕ ದ್ರವ್ಯ ವ್ಯಸನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದು ಆತಂಕಕಾರಿ ವಿಚಾರವಾಗಿದೆ. ಕಿರಿ ವಯಸ್ಸಿನಲ್ಲಿ ದುಶ್ಚಟಕ್ಕೆ ಗುರಿಯಾಗಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಗೂ ತಮ್ಮ ಭವ್ಯ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಇಂತಹ ಪ್ರವೃತ್ತಿಯ ಕಡೆಗೆ ಮನಸ್ಸು ಹರಿಸಬಾರದು ಎಂದರು.

ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಶಿವರಾಜ್ ಮುಧೋಳ್ ಮಾತನಾಡಿದರು. ಪೊನ್ನಂಪೇಟೆ ಠಾಣಾಧಿಕಾರಿ ಜಿ. ನವೀನ್ ಮಾತನಾಡಿದರು. ವಿದ್ಯಾರ್ಥಿನಿ ನೈಸಿತಾ ಚೊಂದಮ್ಮ ಟಿ.ಎಂ. ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭ ಪೊನ್ನಂಪೇಟೆ ಪೊಲೀಸ್ ಠಾಣೆ ಅಪರಾಧ ವಿಭಾಗ ಉಪನಿರೀಕ್ಷಕ ಸುಬ್ರಮಣಿ, ಸಿ.ಐ.ಪಿ.ಯು. ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ, ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.*ಗೋಣಿಕೊಪ್ಪ: ಕಾವೇರಿ ಕಾಲೇಜು ವಿದ್ಯಾರ್ಥಿಗಳಿಗೆ ಗೋಣಿಕೊಪ್ಪ ಪೊಲೀಸ್ ಠಾಣಾ ವತಿಯಿಂದ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಅಂರ‍್ರಾಷ್ಟಿçÃಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ಕಾರ್ಯಕ್ರಮ ಆಯೋಜಿಸಿ ವಿದ್ಯಾರ್ಥಿಗಳಿಗೆ ವೀರಾಜಪೇಟೆ ತಾಲೂಕು ಉಪ ಪೊಲೀಸ್ ಅಧೀಕ್ಷಕ ಮೋಹನ್ ಆರ್. ಅವರು ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ತಿಳಿಸಿದರು. ಗೋಣಿಕೊಪ್ಪಲು ಠಾಣಾಧಿಕಾರಿ ರೂಪಾದೇವಿ ಬಿರಾದಾರ್ ಮಾತನಾಡಿ, ಇಂದಿನ ಯುವ ಜನತೆಯು ಮೋಜು, ಮಸ್ತಿ, ತಡರಾತ್ರಿ ಪಾರ್ಟಿ ಎಂದು ಜೀವನ ಶೈಲಿಯನ್ನೇ ಬದಲಾಯಿಸಿ ಕೊಂಡಿದ್ದಾರೆ. ಇದರಿಂದ ಹದಿಹರೆಯದ ವಯಸ್ಸಿನಲ್ಲಿ ಹಾದಿ ತಪ್ಪುವುದು ಹೀಗಾಗಿ ಯುವಕರಂತೂ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದು, ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳುಮಾಡಿ ಕೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಪ್ಪ ಮಾದಕ ವ್ಯಸನವು ಗುಪ್ತವಾಗಿ ನಡೆಯುವ ಅಪರಾಧ ಚಟುವಟಿಕೆ ಯಾಗಿರುವುದರಿಂದ ಇದು ಬೆಳಕಿಗೆ ಬರುವ ಪ್ರಮಾಣ ಸಹಜವಾಗಿ ಕಡಿಮೆ ಇದ್ದು ಸಮಾಜದ ಮೇಲೆ ವಿಶೇಷವಾಗಿ ಯುವಜನರ ಮೇಲೆ ಋಣಾತ್ಮಕ ಪರಿಣಾಮವನ್ನು ಹೊಂದಿದೆ. ಯುವ ಸಮೂಹ ಆಕರ್ಷಕವಾಗಿ ಕಾಣುವ ಈ ಜಾಲಕ್ಕೆ ಸಿಲುಕಿ ನಕಾರಾತ್ಮಕ ಹಾದಿ ತುಳಿಯದಂತೆ ಎಚ್ಚರ ವಹಿಸಬೇಕಿದೆ ಎಂದರು.

ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಅಕ್ರಂ, ವಿಪ್ರ ನೀಲಮ್ಮ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿಯ ಸಂಚಾಲಕ ಚೇತನ್ ಚಿಣ್ಣಪ್ಪ, ಪದವಿ ವಿಭಾಗದ ಅಪರಾಧ ಸಮಿತಿಯ ಸಂಚಾಲಕ ರೇಷ್ಮ, ಉಪನ್ಯಾಸಕರಾದ ಕುಸುಮ್, ಕಾವ್ಯ, ಉಪಪ್ರಾಂಶುಪಾಲೆ ಎಂ.ಕೆ. ಪದ್ಮಾ ಹಾಜರಿದ್ದರು.ನಾಪೋಕ್ಲು: ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸರಕಾರ ಹಲವು ನಿಯಮಗಳನ್ನು ಜಾರಿಗೊಳಿಸಿದೆ ಎಂದು ಠಾಣಾಧಿಕಾರಿ ಮಂಜುನಾಥ್ ಹೇಳಿದರು.

ಸಮೀಪದ ಕುಂಜಿಲದ ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ನಡೆಯಿತು. ಸಮಾಜದಲ್ಲಿ ಜರುಗುತ್ತಿರುವ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳನ್ನು ವಿದ್ಯಾರ್ಥಿಗಳಿಗೆ ಮಂಜುನಾಥ್ ವಿವರಿಸಿದರು. ಅಂತರ್ಜಾಲ ವಂಚನೆಗಳನ್ನು ವಿವರಿಸಿ ಎಚ್ಚರಿಕೆ ನೀಡಿದರು. ತಂಬಾಕು ಉತ್ಪನ್ನಗಳು ಮಾರಕ ಆದರೂ ಅದನ್ನು ಮಾರಾಟ ಮಾಡುತ್ತಿದ್ದಾರೆ.

ಆದರೆ ವಿದ್ಯಾರ್ಥಿಗಳು ಅವುಗಳ ಮೊರೆ ಹೋಗಬಾರದು ಎಂದರು. ಮಾದಕ ವಸ್ತುಗಳ ಬಳಕೆ ವಿರುದ್ಧ ಪ್ರತಿಜ್ಞಾವಿಧಿ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ನಿರ್ವಾಹಕಾಧಿಕಾರಿ ಶಾಹಿದ್ ಅಲಿ, ಮುಖ್ಯೋಪಾಧ್ಯಾಯಿನಿ ಕವಿತಾ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.ವೀರಾಜಪೇಟೆ: ಮಾದಕ ವ್ಯಸನ ಮತ್ತು ಅಕ್ರಮ ಸಾಗಣೆ ವಿರುದ್ಧ ಅರಿವು ಮೂಡಿಸುವ ದೃಷ್ಟಿಯಿಂದ ವೀರಾಜಪೇಟೆಯ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ಅಂರ‍್ರಾಷ್ಟಿçÃಯ ಮಾದಕ ದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು.

ವೀರಾಜಪೇಟೆ ತಾಲೂಕಿನ ಸಬ್ ಇನ್ಸ್ಪೆಕ್ಟರ್ ರವೀಂದ್ರ ಪಾಲ್ಗೊಂಡು ಮಾತನಾಡಿ, ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ವೀರಾಜಪೇಟೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವರುದ್ರಪ್ಪ ಮಾತನಾಡಿ, ಮಾದಕ ದ್ರವ್ಯ ವ್ಯಸನಿಗಳಾಗುವುದರಿಂದ ಕೇವಲ ಕುಟುಂಬವಲ್ಲದೆ ಸಮಾಜ, ರಾಜ್ಯ, ದೇಶಕ್ಕೆ ಕಂಟಕ ಪ್ರಾಯರಾಗುತ್ತಾರೆ ಎಂದರು.

ಧ್ಯಾನ ಮಾಡುವ ಮೂಲಕ ಮನಸ್ಸಿನ ಏಕಾಗ್ರತೆಯನ್ನು ಕಾಪಾಡಿಕೊಳ್ಳಬಹುದು ಎಂದರು. ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಮೋಹನ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ಎನ್.ಎಂ. ನಾಣಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಡಯಾನಾ ಸೋಮಯ್ಯ ಭಾಗವಹಿಸಿದ್ದರು.ಶನಿವಾರಸಂತೆ: ನಮ್ಮ ದೇಶದ ಸಂಸ್ಕೃತಿ-ಸAಸ್ಕಾರ ಮರೆಯಾಗುತ್ತಿದ್ದು, ಯುವಜನಾಂಗ ಇದನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕಾಗಿದೆ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯ ಭಗವಾನ್ ಅಭಿಪ್ರಾಯ ವ್ಯಕ್ತಪಡಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸೋಮವಾರಪೇಟೆ ಬಿ.ಸಿ. ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲಾ ಘಟಕದ ಸಹಭಾಗಿತ್ವದಲ್ಲಿ ಕೊಡ್ಲಿಪೇಟೆಯ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಜಾಲ ಹಳ್ಳಿಹಳ್ಳಿಗಳಲ್ಲೂ ವ್ಯಾಪಿಸುತ್ತಿದ್ದು, ವಿದ್ಯಾರ್ಥಿಗಳು ಜಾಗೃತರಾಗಿರಬೇಕು ಎಂದು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಮಾತನಾಡಿ, ಪ್ರೌಢಶಾಲಾ ಮಕ್ಕಳು ಸಹ ಮಾದಕ ವಸ್ತುಗಳ ಆಕರ್ಷಣೆಗೆ ಒಳಗಾಗುವ ಸಾಧ್ಯತೆ ಹೆಚ್ಚಿದ್ದು, ಈ ವಿಚಾರದಲ್ಲಿ ಜಾಗೃತರಾಗಿರಬೇಕು ಎಂದು ಹೇಳಿದರು.

ಆರೋಗ್ಯ ಕೇಂದ್ರದ ಹದಿಹರೆಯದ ಆಪ್ತ ಸಮಾಲೋಚಕಿ ಶೈಲಜಾ ಮಾತನಾಡಿ, ಹದಿಹರೆಯದಲ್ಲಿ ಆಗುವ ಶಾರೀರಿಕ ಮತ್ತು ಮಾನಸಿಕ ಬದಲಾವಣೆಯ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳ ಬಗ್ಗೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಮಹೇಶ್ ಮಾತನಾಡಿದರು.

ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ಕೆ.ಪಿ. ನಾಗರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕ ಡಿ.ಪಿ. ಸತೀಶ್, ಸೇವಾ ಪ್ರತಿನಿಧಿಗಳಾದ ಕವಿತಾ, ಪ್ರತಿಮಾ, ಉಪನ್ಯಾಸಕರು, ಸಿಬ್ಬಂದಿ ಉಪಸ್ಥಿತರಿದ್ದರು. ಸತೀಶ್ ನಿರೂಪಿಸಿ, ವಂದಿಸಿದರು.ನಾಪೋಕ್ಲು: ಅಂರ‍್ರಾಷ್ಟಿçÃಯ ಮಾದಕ ದ್ರವ್ಯ ವಿರೋಧಿ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನಾಚರಣೆಯನ್ನು ಪಾರಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಮುಖ್ಯೋಪಾಧ್ಯಾಯ ವೇದಪ್ರಸಾದ್ ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ಕೆಡುಕುಗಳು ಮತ್ತು ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಮಾದಕ ದ್ರವ್ಯಗಳ ನಿರ್ಮೂಲನೆಯ ಕುರಿತು ಹಾಗೂ ಅವ್ಯಾಹತವಾಗಿ ನಡೆಯುತ್ತಿರುವ ಕಳ್ಳ ಸಾಗಣೆಯ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದರಲ್ಲದೆ, ಸಾಮಾಜಿಕ ಪಿಡುಗು ನಿವಾರಿಸಿ, ಸಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ದಿಸೆಯಿಂದಲೇ ಸರ್ವರೂ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಹ ಶಿಕ್ಷಕ ಕಿಶೋರ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಶಿಕ್ಷಕಿ ಸುಮಿತ್ರ, ಮಂಜುಳ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಕೊAಡAಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ಸಿದ್ದಾಪುರ: ಮಾದಕ ವಸ್ತುಗಳನ್ನು ಬಳಸದಂತೆ ಸಿದ್ದಾಪುರ ಪೊಲೀಸ್ ಠಾಣೆಯ ಮುಖ್ಯಪೇದೆ ಹೆಚ್.ಎಸ್. ಸಂತೋಷ್ ವಿದ್ಯಾರ್ಥಿಗಳಿಗೆ ಹೇಳಿದರು.

ಕೊಂಡAಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕು ಹಾಗೂ ಮಾದಕ ವಸ್ತುಗಳನ್ನು ಬಳಸಿದ್ದಲ್ಲಿ ತಮ್ಮ ಮುಂದಿನ ಭವಿಷ್ಯಕ್ಕೆ ಮಾರಕವಾಗುತ್ತದೆ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಜಯಂತಿ ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.