ವೀರಾಜಪೇಟೆ, ಜು. ೧: ನಾಡಪ್ರಭು ಕೆಂಪೇಗೌಡರು ಅಂದಿನ ಕಾಲದಲ್ಲಿಯೇ ದೂರ ದೃಷ್ಟಿಯನ್ನಿಟ್ಟುಕೊಂಡು ಜನರಿಗೆ ಅಗತ್ಯವಿರುವ ನೀರು ಕೆರೆ ಕಟ್ಟೆಗಳನ್ನು ನಿರ್ಮಿಸುವ ಮೂಲಕ ಅನೇಕ ಮಹಾನ್ ಕಾರ್ಯಗಳನ್ನು ಮಾಡಿರುವುದರಿಂದ ಇಂದು ಬೆಂಗಳೂರು ದೇಶ ವಿದೇಶದಲ್ಲಿ ಗಮನ ಸೆಳೆಯುವಂತಾಗಿದೆ ಎಂದು ಮುಖ್ಯ ಮಂತ್ರಿ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತದ ವತಿಯಿಂದ ಸ್ಥಳಿಯ ಪುರಭವನದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಸಮಾರಂಭದಲ್ಲಿ ಜೋತಿ ಬೆಳಗಿಸಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕರು ಮಾತನಾಡಿ ಕೆಂಪೇಗೌಡರು ಮುಖ್ಯವಾಗಿ ಕನ್ನಡ ಅಭಿಮಾನಿಯಾಗಿ ಕನ್ನಡ ಭಾಷೆಗೆ ನೀಡಿರುವ ಕೊಡುಗೆಯನ್ನು ಮರೆಯುವಂತಿಲ್ಲ. ಆಳ್ವಿಕೆಯನ್ನು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪ್ರಜೆಗಳು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಿಸಲು ಸಮಾಜಮುಖಿ ಕೆಲಸಗಳು ಆಗಬೇಕು ಎಂದರು. ಇಂದು ಇತಿಹಾಸವನ್ನು ತಿರುಚುವ ಕೆಲಸ ಕೆಲವು ಕಡೆ ಆಗುತ್ತಿದೆ. ಅದರು ನೈಜತೆ ಮಹನೀಯರ ಕಾರ್ಯವೈಖರಿ ಅವರ ಹೃದಯವಂತಿಕೆಗಳು ಉಳಿದಿವೆ. ಜನರು ತಲೆ ತಗ್ಗಿಸಿ ನಡೆಯುತ್ತಾರೆ ಎಂದು ಅಧಿಕಾರ ಚಲಾಯಿಸುವುದು ಮುಖ್ಯವಲ್ಲ. ಜನರು ಮುಗ್ದರಾಗಿ ಅವರವರ ಕೆಲಸದಲ್ಲಿ ತೊಡಗಿಸಿಕೊಂಡಿರುತ್ತಾರೆ. ಇದನ್ನು ಅರಿತು ಜವಬ್ದಾರಿಯುತ ಸ್ಥಾನದಲ್ಲಿರುವವರು ಅವರಿಗಾಗಿ ಉತ್ತಮ ಕೆಲಸ ಮಾಡಬೇಕು ಎಂದರಲ್ಲದೆ, ಒಕ್ಕಲಿಗರ ಸಮಾಜದ ರಾಜ್ಯ ದೇಶಕ್ಕೆ ತನ್ನದೆ ಕೊಡುಗೆ ನೀಡಿದೆ. ಅದರಲ್ಲಿ ಕ್ರೀಡೆ ರಾಜಕೀಯ ಮುಂತಾದ ಕ್ಷೇತ್ರದಲ್ಲಿ ಅಪಾರ ಕೊಡುಗೆ ಇರುವುದಾಗಿ ಶಾಸಕರು ಹೇಳಿದರು.
ಮುಖ್ಯ ಭಾಷಣಕಾರರಾಗಿ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ಪ್ರಾಧ್ಯಾಪಕ ಗಂಗಾಧರ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು, ತಾಲೂಕು ತಹಶೀಲ್ದಾರ್ ರಾಮಚಂದ್ರ ಸ್ವಾಗತಿಸಿದರು, ವೇದಿಕೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಶ್ ಪದ್ಮನಾಭ, ಜಿಲ್ಲಾ ವಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಡಾಲು, ಕೊಡಗೂ ವಕ್ಕಲಿಗರ ಸಂಘದ ಉಪಾಧ್ಯಕ್ಷ ನಾಗರಾಜು, ನಿರ್ದೇಶಕ ಸುರೇಶ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಆರ್.ಕೆ. ಸಲಾಂ, ಪುರಸಭೆಯ ಸದಸ್ಯರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ವಿಜೇತ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿ ಅತಿಥಿಗಳು ಬಹುಮಾನ ವಿತರಿಸಿದರು. ಶಿಕ್ಷಣ ಇಲಾಖೆಯ ಬಿಆರ್ಪಿ ವಮನಾ ನಿರೂಪಿಸಿ, ವಂದಿಸಿದರು.