ಸೋಮವಾರಪೇಟೆ, ಜು. ೧: ನಾಡಪ್ರಭು ಕೆಂಪೇಗೌಡ ಅವರ ಜನ್ಮ ದಿನಾಚರಣೆಯನ್ನು ಸೋಮವಾರಪೇಟೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಒಕ್ಕಲಿಗರ ಸಂಘದ ಸಂಯುಕ್ತ ಆಶ್ರಯದಲ್ಲಿ, ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕೆಂಪೇಗೌಡರ ೫೧೫ನೇ ಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ತಿಲೋತ್ತಮೆ, ಬೆಂಗಳೂರು ನಿರ್ಮಾತೃ ಕೆಂಪೇಗೌಡ ಅವರ ದೂರದೃಷ್ಟಿ ಆಡಳಿತ, ಸಾಮಾಜಿಕ ನ್ಯಾಯ ಇಂದಿನ ಅಗತ್ಯವಾಗಿದೆ ಎಂದರು.
ನಾಗರಿಕತೆ ಉಗಮವಾಗಲು ಅಗತ್ಯವಾಗಿ ನೀರು ಬೇಕೆಂಬ ದೂರದೃಷ್ಟಿಯಿಂದ ಬೆಂಗಳೂರು ಯಲಹಂಕದ ಪಾಳೇಗಾರ ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರಿನಲ್ಲಿ ನೂರಾರು ಕೆರೆಗಳನ್ನು ಕಟ್ಟಿ, ಕೃಷಿಕರಿಗೆ ಪ್ರೋತ್ಸಾಹ ನೀಡಿದರು ಎಂದು ಬಣ್ಣಿಸಿದರು. ಕಾರ್ಯಕ್ರಮದ ಮತ್ತೋರ್ವ ಅತಿಥಿ, ವಕೀಲರಾದ ಅಭಿಮನ್ಯು ಕುಮಾರ್ ಮಾತನಾಡಿ, ಬೆಂಗಳೂರು ವಿಶ್ವಮಾನ್ಯತೆ ಪಡೆಯಲು ನಾಡಪ್ರಭು ಕೆಂಪೇಗೌಡರು ಮುಖ್ಯ ಕಾರಣರಾಗಿದ್ದಾರೆ. ನಮ್ಮ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಬೆಂಗಳೂರನ್ನು ನೆಮ್ಮದಿಯಾಗಿದ್ದೇವೆ. ಕೆಂಪೇಗೌಡರ ಕೊಡುಗೆ ಅಪಾರವಾದುದು ಎಂದು ಹೇಳಿದರು. ಕೆಂಪೇಗೌಡರು ಕಲೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದರು. ಅನೇಕ ದೇವಾಲಯಗಳನ್ನು ಕಟ್ಟಿದ್ದಾರೆ. ಅನಿಷ್ಟ ಪದ್ಧತಿ ಹಾಗೂ ಮೂಢನಂಬಿಕೆಗಳನ್ನು ನೇರವಾಗಿ ವಿರೋಧಿಸಿ, ಕೆಲವನ್ನು ನಿಷೇಧ ಮಾಡಿದ್ದರು ಎಂದು ಸ್ಮರಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗ ಬೇಕು. ಜನಪ್ರತಿನಿಧಿಗಳು, ಮುಖಂಡರುಗಳು ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಒತ್ತಾಯ ಮಾಡಿದರು. ಕೆಂಪೇಗೌಡರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿ ಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ನವೀನ್ ಕುಮಾರ್ ವಹಿಸಿದ್ದರು. ಪಟ್ಟಣ ಪಂಚಾಯಿತಿ ಸದಸ್ಯರಾದ ಪಿ.ಕೆ. ಚಂದ್ರು, ಶೀಲಾ ಡಿಸೋಜಾ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೆ.ಪಿ. ವೀರಣ್ಣ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ನಾಚಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಸದಸ್ಯ ನಂದಕುಮಾರ್ ಇದ್ದರು. ಇದೇ ಸಂದರ್ಭ ನ್ಯಾನೊ ತಂತ್ರಜ್ಞಾನ ಪಿಎಚ್ಡಿ ಪದವಿ ಗಳಿಸಿರುವ, ನಗರೂರು ಗ್ರಾಮದ ಗ್ಲೆನಿಟಾ ಡಿಸೋಜ ಅವರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು. ದಿನಾಚರಣೆ ಪ್ರಯುಕ್ತ ಶಾಲಾ ಮಕ್ಕಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.