ಮಡಿಕೇರಿ, ಜು. ೧: ರಾಜಕೀಯ ನಂಟು ಹೊಂದಿರುವ ಭೂ ಮಾಫಿಯಾಗಳು ವಾಣಿಜ್ಯ ದುರುದ್ದೇಶಕ್ಕಾಗಿ ಆದಿಮಸಂಜಾತ ಕೊಡವರ ಪವಿತ್ರ ಕೊಡವ ಲ್ಯಾಂಡ್ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಕಪ್ಪು ಹಣ ಚಲಾವಣೆಯಾಗುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು. ನಾಚಪ್ಪ ಆರೋಪಿಸಿದರು.
ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂ ವಿಲೇವಾರಿಯನ್ನು ಸ್ಥಗಿತ ಗೊಳಿಸಬೇಕೆಂದು ಒತ್ತಾಯಿಸಿ ಸಿಎನ್ಸಿ ವತಿಯಿಂದ ಕಕ್ಕಬ್ಬೆ ಜಂಕ್ಷನ್ನಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.
ಭೂಮಾಫಿಯಾಗಳು ಕಪ್ಪು ಹಣವನ್ನು ಬಿಳಿ ಮಾಡಲು ಕೊಡವ ಲ್ಯಾಂಡ್ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಡಗಿನಲ್ಲಿ ಕಾಫಿ ತೋಟಗಳ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಜಮೀನನ್ನು ಒಟ್ಟಾಗಿ ಖರೀದಿಸದೆ ಬಿಡಿ ಬಿಡಿಯಾಗಿ ಬೇನಾಮಿ ಹೆಸರಿನಲ್ಲಿ ಖರೀದಿಸಿ ನಂತರ ಭೂಪರಿವರ್ತನೆ ಮಾಡಿಸಿಕೊಳ್ಳುತ್ತಿದ್ದಾರೆ. ವಾಣಿಜ್ಯ ಬ್ಯಾಂಕ್ ಮತ್ತು ಸಹಕಾರ ಬ್ಯಾಂಕ್ಗಳಿAದ ಸುಲಭವಾಗಿ ಸಾಲ ಪಡೆಯುವ ಬಂಡವಾಳಶಾಹಿಗಳು ರೆಸಾರ್ಟ್, ವಿಲ್ಲಾಗಳನ್ನು ನಿರ್ಮಿಸುತ್ತಿದ್ದಾರೆ. ಆದರೆ ಸ್ಥಳೀಯರು ಕೇವಲ ಸ್ವಂತ ಮನೆಕಟ್ಟಲು ಅನುಮತಿಗಾಗಿ ಕಚೇರಿಯಿಂದ ಕಚೇರಿಗೆ ವರ್ಷಗಟ್ಟಲೆ ಅಲೆಯಬೇಕಾಗಿದೆ. ಅಧಿಕಾರಿಗಳಿಗೆ ಲಂಚ ನೀಡಬೇಕಾಗಿದೆ ಎಂದು ನಾಚಪ್ಪ ಆರೋಪಿಸಿದರು.
ಜಿಲ್ಲೆಯ ಇತರೆಡೆಯಂತೆ ಕಕ್ಕಬ್ಬೆ ನಾಲಡಿಯಲ್ಲಿ ೩೦೦ ಎಕರೆ ಜಾಗವನ್ನು ಭೂಪರಿವರ್ತನೆ ಮಾಡಲು ಹುನ್ನಾರ ನಡೆದಿದೆ. ಜನರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದರೂ ದೆಹಲಿ ಮತ್ತು ಮುಂಬೈ ಭಾಗದ ರಾಜಕೀಯ ಸಂಕುಲಗಳು ಭೂಮಾಫಿಯಾದ ಪರವಾಗಿ ರೆಸಾರ್ಟ್ ನಿರ್ಮಾಣದ ಅನುಮತಿಗೆ ಪ್ರಭಾವ ಬೀರುತ್ತಿದ್ದಾರೆ. ಮರಂದೋಡು ಗ್ರಾಮದ ಮೇರಿಯಂಡ ಅಂಗಡಿ ಪ್ರದೇಶದಲ್ಲಿ ಭತ್ತದ ಗದ್ದೆ ಮತ್ತು ಪರ್ವತ ಕೊರೆದು ಟೌನ್ ಶಿಪ್ಗಾಗಿ ಭೂಪರಿವರ್ತನೆಯಾಗುತ್ತಿದ್ದು, ಕೊಡವ ಲ್ಯಾಂಡ್ನ ಕಾವೇರಿ ಒಡಲು ನಾಶವಾಗುತ್ತಿದೆ.
ಸಿದ್ದಾಪುರದಲ್ಲಿ ೨೪೦೦ ಎಕರೆ ಕಾಫಿ ತೋಟಗಳು ಭೂಪರಿವರ್ತನೆ ಯಾಗುತ್ತದೆ ಎಂದರು. ಇದಕ್ಕಾಗಿ ವ್ಯಾಪಕ ಜನಜಾಗೃತಿ ಅಗತ್ಯವಾಗಿದ್ದು, ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸ ಲಾಗುವುದು ಎಂದು ಹೇಳಿದರು.
ಅಪ್ಪಾರಂಡ ನಂದಿನಿ ನಂಜಪ್ಪ, ನಾಟೋಳಂಡ ಕಮಲಾ, ಅರೆಯಡ ಸವಿತಾ, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಪಾಂಡAಡ ನರೇಶ್, ಕೇಟೋಳಿರ ಸನ್ನಿ ಸೊಮಣ್ಣ, ಬಾಚಮಂಡ ರಾಜಾ ಪೂವಣ್ಣ, ಚೇನಂಡ ಸುರೇಶ್, ಅಪ್ಪಾರಂಡ ಶ್ರೀನಿವಾಸ್, ಉದಿಯಂಡ ಸುಭಾಷ್, ಅಪ್ಪಾರಂಡ ಪ್ರಕಾಶ್, ಕಲ್ಯಾಟಂಡ ರಘು, ಅರೆಯಡ ಗಿರೀಶ್, ಅಪ್ಪಾರಂಡ ಪ್ರಸಾದ್, ಅಪ್ಪಾರಂಡ ದೇವಯ್ಯ, ಅಪ್ಪಾರಂಡ ವಿಜು, ನಾಟೋಳಂಡ ನಂಜುAಡ, ಕಲ್ಯಾಟಂಡ ಅರುಣ್, ಕಲ್ಯಾಟಂಡ ಸುಧಾ, ಕಲಿಯಂಡ ಪ್ರಕಾಶ್, ಜಮ್ಮಡ ಮೋಹನ್, ಕಾಂಡೇರ ಸುರೇಶ್, ಪರದಂಡ ಕಸ್ತೂರಿ, ಅರೆಯಡ ಅಶೋಕ್, ಅಂಜಪರವAಡ ರಂಜು, ನಾಟೋಳಂಡ ಶಂಭು, ಮಂಡೀರ ಮಿಥುನ್, ಅಯ್ಯನೆರವಂಡ ಬಾಬಿ, ಪಾಡಿಯಂಡ ಶರಣು, ಬಾಚಮಂಡ ಲವ, ಪೊನ್ನೊಲತಂಡ ರಘು, ಬಾಚಮಂಡ ಭರತ್, ಮಂಡೀರ ರಿಪನ್, ಕೋಡಿಮಣಿಯಂಡ ಕುಟ್ಟಪ್ಪ, ಕೋಡಿಮಣಿಯಂಡ ಶಂಭು, ಕಂಬೆಯAಡ ಸುಬ್ರಮಣಿ, ಅಲ್ಲರಂಡ ಸತೀಶ್, ಅಲ್ಲರಂಡ ಕಾವೇರಪ್ಪ, ಕಲಿಯಂಡ ಡಾಲಿ, ಕೋಡಿಮಣಿಯಂಡ ಗಪುö್ಪ, ಕಲಿಯಂಡ ರಾಜ, ಬಟ್ಟೀರ ರಮೇಶ್, ಕೋಟೆರ ಚಿಮ್ಮ, ಕೋಡಿಮಣಿಯಂಡ ರಮೇಶ್, ಪೊನ್ನೊಲತಂಡ ಬಿದ್ದಯ್ಯ, ಪಾಲೆಕಂಡ ಪ್ರತಾಪ್, ಚೋಯಮಾಡಂಡ ಹರಿ, ಮಾದಂಡ ಅಪ್ಪಯ್ಯ, ಅರೆಯಡ ಸೋಮಣ್ಣ, ಕಂಬೆಯAಡ ದೊರೆ, ಬಾಚಮಂಡ ಬೆಲ್ಲು ಪೂವಪ್ಪ ಮತ್ತಿತರರು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ಹಾಗೂ ಕೊಡವ ಲ್ಯಾಂಡ ಪರ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ತಾ.೬ ರಂದು ಚೆಟ್ಟಳ್ಳಿ ಮತ್ತು ತಾ.೧೫ ರಂದು ಪೊನ್ನಂಪೇಟೆಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಯು.ನಾಚಪ್ಪ ಇದೇ ಸಂದರ್ಭ ತಿಳಿಸಿದರು.