ಮಡಿಕೇರಿ, ಜು. ೧: ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ೨೦೨೪-೨೫ನೇ ಸಾಲಿನ ವಾರ್ಡ್ ಸಭೆಗಳನ್ನು ಆಯಾ ವಾರ್ಡ್ಗಳಲ್ಲಿ ಹಾಗೂ ಗ್ರಾಮಸಭೆ ತಾ.೧೧ ರಂದು ಗುರುವಾರ ಪೂರ್ವಾಹ್ನ ೧೧ ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಜಿ. ಉಷಾ ಅವರ ಅಧ್ಯಕ್ಷತೆಯಲ್ಲಿ ಹಾಗೂ ನೋಡೆಲ್ ಅಧಿಕಾರಿ ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡಗೌಡ ಅವರ ಉಪಸ್ಥಿತಿಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
ತಾ.೨ ರಂದು ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಯಾಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಮಧ್ಯಾಹ್ನ ೨ ಗಂಟೆಗೆ ಮುಟ್ಲು ಅಂಗನವಾಡಿ ಕೇಂದ್ರದಲ್ಲಿ ಗಾಳಿಬೀಡು ಗ್ರಾಮ ಪಂಚಾಯಿತಿ ಸದಸ್ಯೆ ಕೆ.ಟಿ ಧರ್ಮಾವತಿ ಅಧ್ಯಕ್ಷತೆಯಲ್ಲಿ ವಾರ್ಡ್ಸಭೆ ನಡೆಯಲಿದೆ. ತಾ.೩ ರಂದು ಬೆಳಿಗ್ಗೆ ೧೧ ಗಂಟೆಗೆ ಗಾಳಿಬೀಡು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಸದಸ್ಯ ವೈ.ಎಸ್ ರಾಜಶೇಖರ್ ಅಧ್ಯಕ್ಷತೆಯಲ್ಲಿ ವಾರ್ಡ್ ಸಭೆ ನಡೆಯಲಿದೆ.
ತಾ. ೪ ರಂದು ಕಾಲೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ ೧೧ ಗಂಟೆಗೆ ಪಂಚಾಯಿತಿ ಸದಸ್ಯ ಕೆ.ಎಂ ಪೆಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ವಾರ್ಡ್ ಸಭೆ ನಡೆಯಲಿದೆ. ತಾ.೫ ರಂದು ಬೆಳಿಗ್ಗೆ ೧೧ ಗಂಟೆಗೆ ೨ನೇ ಮೊಣ್ಣಂಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಂಚಾಯಿತಿ ಸದಸ್ಯೆ ಪುಷ್ಪಾವತಿ ಬಿ.ಡಿ ಅಧ್ಯಕ್ಷತೆಯಲ್ಲಿ ವಾರ್ಡ್ ಸಭೆ ನಡೆಯಲಿದೆ.
ತಾ.೫ ರಂದು ಕಡಮಕಲ್ಲು ಅಂಗನವಾಡಿ ಕೇಂದ್ರದಲ್ಲಿ ಮಧ್ಯಾಹ್ನ ೩ ಗಂಟೆಗೆ ಪಂಚಾಯಿತಿ ಸದಸ್ಯ ಪಿ.ಜೆ ಸೋಮಯ್ಯ ಅವರ ಅಧ್ಯಕ್ಷತೆಯಲ್ಲಿ ವಾರ್ಡ್ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.