ಸುಂಟಿಕೊಪ್ಪ, ಜು. ೧ : ಹಾದ್ರೆ ಹೆರೂರು ವ್ಯಾಪ್ತಿಯ ಹಾರಂಗಿ ಹಿನ್ನೀರಿನಲ್ಲಿ ಭಾನುವಾರ ಸಂಜೆ ಮುಳುಗಿದ್ದ ಮೈಸೂರು ಮೂಲದ ಪ್ರವಾಸಿಗ ಶಶಿ ಕುಮಾರ್ ಎಂಬಾತನ ಮೃತದೇಹವು ಸೋಮವಾರ ಬೆಳಿಗ್ಗೆ ೮ ಗಂಟೆಯ ಸುಮಾರಿಗೆ ಪತ್ತೆಯಾಗಿದೆ.

ಮೈಸೂರಿನಿಂದ ೯ ಜನರ ಸ್ನೇಹಿತರ ತಂಡವೊAದು ಶನಿವಾರ ಕೊಡಗು ಪ್ರವಾಸಿ ತಾಣವನ್ನು ವೀಕ್ಷಿಸಲು ಆಗಮಿಸಿದ್ದರು. ಹಾಗೆಯೇ ಭಾನುವಾರ ಸಂಜೆ ಮೈಸೂರಿಗೆ ವಾಪಾಸಾಗುವ ಮುನ್ನ ಸುಂಟಿಕೊಪ್ಪ ಸಮೀಪದ ಹೆರೂರು ಹಾರಂಗಿ ಹಿನ್ನೀರು ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಈಜಲು ತೆರಳಿದ ಮೈಸೂರಿನ ಮೇಟಗಳ್ಳಿ ನಿವಾಸಿ ಶಶಿಕುಮಾರ್ ಅವರು ಮುಳುಗಿ ಕಣ್ಮರೆಯಾಗಿದ್ದರು. ಭಾನುವಾರ ರಾತ್ರಿಯವರೆಗೂ ಸುಂಟಿಕೊಪ್ಪ

(ಮೊದಲ ಪುಟದಿಂದ) ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಹಾಗೂ ನುರಿತ ಈಜುಗಾರ ಹುಡುಕಾಟ ನಡೆಸಿದ್ದರು. ರಾತ್ರಿಯಾದ್ದರಿಂದ ಕಾರ್ಯಾಚರಣೆ ಸ್ಥಗಿತಗೊಂಡಿತ್ತು.

ಸೋಮವಾರ ಬೆಳಿಗ್ಗೆ ೬ ಗಂಟೆಯಿAದ ಕುಶಾಲನಗರ ಡಿವೈಎಸ್ಪಿ ಗಂಗಾದರಪ್ಪ, ಸಿಪಿಐ ರಾಜೇಶ್ ಕೋಟ್ಯಾನ್, ಮಾರ್ಗದರ್ಶನದಲ್ಲಿ ಸುಂಟಿಕೊಪ್ಪ ಅಪರಾಧ ಪತ್ತೆದಳದ ಪಿಎಸ್ ಐ ಸ್ವಾಮಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸತೀಶ , ಜಗದೀಶ್, ನಿಶಾಂತ್, ಸತೀಶ್ ಇಳೆಗೆರೆ ಅವರುಗಳು ಕಾರ್ಯಾಚರಣೆ ನಡೆಸಿ ಬೆಳಿಗ್ಗೆ ೮ ಗಂಟೆಯ ಸಮಯದಲ್ಲಿ ಮೃತದೇಹವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಂತರ ವಾರಿಸುದಾರರಿಗೆ ಒಪ್ಪಿಸಲಾಯಿತು.