ಸಿದ್ದಾಪುರ, ಜು. ೧: ಅಮ್ಮತ್ತಿ ಹೋಬಳಿ ನಾಡು ಕಚೇರಿಯಲ್ಲಿ ರಾಷ್ಟಿçÃಯ ಸಾಮಾಜಿಕ ನೆರವು ಯೋಜನೆಯಡಿಯಲ್ಲಿ ಪಿಂಚಣಿದಾರರ ಕುಂದುಕೊರತೆ ಸಭೆ ವೀರಾಜಪೇಟೆ ತಹಶೀಲ್ದಾರ್ ಹೆಚ್.ಎನ್. ರಾಮಚಂದ್ರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಅರ್ಹ ಫಲಾನುಭವಿಗಳಿಗೆ ಸರ್ಕಾರದ ವತಿಯಿಂದ ವಿವಿಧ ರೀತಿಯ ಪಿಂಚಣಿಗಳನ್ನು ನೀಡಲಾಗುತ್ತಿದೆ. ಸರ್ಕಾರದ ನಿರ್ದೇಶನದಂತೆ ಪಿಂಚಣಿ ದಿನವನ್ನು ಆಯೋಜಿಸಲಾಗಿದ್ದು, ಪಿಂಚಣಿದಾರರ ಸಮಸ್ಯೆಗಳಿದ್ದಲ್ಲಿ ಆಯಾ ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಯನ್ನು ಭೇಟಿ ಮಾಡಿ ಮಾಹಿತಿ ನೀಡುವಂತೆ ಸಲಹೆ ನೀಡಿದರು. ಪಿಂಚಣಿದಾರರಿಗೆ ಮಂಜೂರಾದ ಪಿಂಚಣಿ ಆದೇಶ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಿದರು. ನೂತನ ಅರ್ಜಿಗಳನ್ನು ಸ್ವೀಕರಿಸಿದರು. ಈ ಸಂದರ್ಭ ಅಮ್ಮತ್ತಿ ಹೋಬಳಿಯ ಕಂದಾಯ ಪರಿವೀಕ್ಷಕ ಬಿ.ಆರ್. ಅನಿಲ್ ಕುಮಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.