ವೀರಾಜಪೇಟೆ, ಜು. ೧: ಭಾನುವಾರ ರಾತ್ರಿ ಸುರಿದ ಬಾರಿ ಮಳೆಗೆ ವೀರಾಜಪೇಟೆ ಪುರಸಭೆ ವ್ಯಾಪ್ತಿಯ ವಾರ್ಡ್ ಸಂಖ್ಯೆ ೩ರ ದಖ್ಖನಿ ಮೊಹಲ್ಲಾದಲ್ಲಿ ಸಣ್ಣ ಪ್ರಮಾಣದಲ್ಲಿ ಬರೆ ಕುಸಿದಿದೆ. ಬರೆ ಕುಸಿದ ಪರಿಣಾಮವಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸೋಮಣ್ಣ ಎಂಬವರ ಮಾರುತಿ ಕಾರಿನ ಬದಿಗೆ ಮಣ್ಣು ಕಲ್ಲು ಬಿದ್ದು ಹಾನಿಯಾಗಿದೆ.

ಸ್ಥಳಕ್ಕೆ ಪುರಸಭಾ ಸದಸ್ಯ ರಾಜೇಶ್ ಪದ್ಮನಾಭ, ಮುಖ್ಯಾಧಿಕಾರಿ ಎ. ಚಂದ್ರಕುಮಾರ್ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದರು. ಪುರಸಭಾ ಸಿಬ್ಬಂದಿಗಳು ಮಣ್ಣು ತೆರವು ಕಾರ್ಯ ನಡೆಸಿದರು.