ಮಡಿಕೇರಿ, ಜು. ೧ : ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕರ, ಕಾರ್ಯಕರ್ತರ ತೇಜೋವಧೆs ಮಾಡಿ ಸಂದೇಶ ಹರಿಬಿಟ್ಟ ಆರೋಪದಡಿ ಕಾಂಗ್ರೆಸ್ ಮುಖಂಡ ತೆನ್ನೀರ ಮೈನ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಮುಖಂಡ ಮಾಚಿಮಾಡ ರವೀಂದ್ರ ನೀಡಿದ್ದ ದೂರಿನ ಸಂಬAಧ ತನಿಖೆ ನಡೆಸಲು ನ್ಯಾಯಾಲಯದಿಂದ ಪೊಲೀಸರು ಅನುಮತಿ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಜೂನ್ ೨೦ ರಂದು ವೀರಾಜಪೇಟೆಯಲ್ಲಿ ಇಂಧನ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪಕ್ಷದ ನಾಯಕರು, ಕಾರ್ಯಕರ್ತರ ಬಗ್ಗೆ ಅವಹೇಳನಕಾರಿ ಪದ ಬಳಸಿ ಅವಮಾನಕಾರಿ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡ ತೆನ್ನೀರ ಮೈನ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಾಚಿಮಾಡ ರವೀಂದ್ರ ಅವರು ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಪ್ರಕರಣ ಅಸಂಜ್ಞೆ ಪ್ರಕರಣವಾಗಿರುವ ಕಾರಣ ನ್ಯಾಯಾಲಯದ ಅನುಮತಿ ದೊರೆತು ಮುಂದಿನ ಕ್ರಮಕೈಗೊಳ್ಳಬೇಕೆಂಬ ಅಂಶದ ಅನುಸಾರ ನಗರ ಪೊಲೀಸರು ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ಸೆಕ್ಷನ್ ೫೦೫ (೧)(ಃ), ೫೦೧ (೧) (ಅ) ಅಡಿ ಪ್ರಕರಣ ದಾಖಲಾಗಿದೆ.