ಮಡಿಕೇರಿ, ಜು.೧: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿ.ಯು.ಸಿ. ಮತ್ತು ಪಿಯುಸಿ. ಸಮನಾಂತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ ೨೦ ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್.ಸಿ. ಮತ್ತು ಎಸ್.ಟಿ. ರೂ.೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. ೧ ಲಕ್ಷ. ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮಡಿಕೇರಿ ದೂ. ೦೮೨೭೨-೨೯೫೬೨೮, ಮಡಿಕೇರಿ ತಾಲೂಕು ಕಚೇರಿ ಮೊ. ೮೭೬೨೪೭೬೭೯೦, ವೀರಾಜಪೇಟೆ ತಾಲೂಕು ಕಚೇರಿ ಮೊ. ೯೮೪೪೫೩೧೦೪೦, ಸೋಮವಾರಪೇಟೆ ತಾಲೂಕು ಕಚೇರಿ ಮೊ. ೯೪೮೧೭೭೨೧೪೩ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ತಿಳಿಸಿದ್ದಾರೆ.