ಕುಶಾಲನಗರ, ಜು. ೨: ಬೆಂಗಳೂರು ಹರ್ಷಾಲಿ ಫೌಂಡೇಷನ್ ಹಾಗೂ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಶಾಲನಗರ ಸಮೀಪದ ದೊಡ್ಡಹೊಸೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಉಚಿತ ನೋಟ್ ಬುಕ್ ಹಾಗೂ ಪರಿಕರಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆÀ ಬಿ.ಆರ್. ಸವಿತಾ ರೈ ಅವರು ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಬಗ್ಗೆ ಸಂಘ-ಸAಸ್ಥೆಗಳು ಕಾಳಜಿ ವಹಿಸುವುದರೊಂದಿಗೆ ಶಾಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ತಮ್ಮ ಪುತ್ರಿಯ ನೆನಪಿಗಾಗಿ ಬೆಂಗಳೂರಿನ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಡಿ. ಲೋಕೇಶ್ ಮತ್ತು ಹರ್ಷಾಲಿ ಫೌಂಡೇಶನ್ ಮುಖ್ಯಸ್ಥೆ ಸುಧಾಮಣಿ ಲೋಕೇಶ್ ದಂಪತಿ ರಾಜ್ಯದಲ್ಲಿ ವಿವಿಧೆಡೆ ಸರಕಾರಿ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಶಾಲಾ ಪರಿಕರಗಳನ್ನು ವಿತರಿಸುತ್ತಿರುವ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪಿರಿಯಾಪಟ್ಟಣ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸರಕಾರಿ ಶಾಲೆಗಳ ಮಕ್ಕಳ ಬಗ್ಗೆ ಕಾಳಜಿ ಹೊಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯP್ಷÀ ಚಂದ್ರಮೋಹನ್ ಮಾತನಾಡಿ, ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಹೋಬಳಿ ಘಟಕಕ್ಕೆ ೨೫ ವರ್ಷಗಳು ಸಂದಿದ್ದು, ಈ ಸಂಬAಧ ಕುಶಾಲನಗರ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯಲ್ಲಿ ಸಂಘ-ಸAಸ್ಥೆಗಳ ಜೊತೆಗೆ ಸೇರಿ ೨೫ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಬೆಂಗಳೂರಿನ ಹರ್ಷಾಲಿ ಫೌಂಡೇಷನ್ ಪ್ರಮುಖರಾದ ಸುಧಾಮಣಿ ಮತ್ತು ಲೋಕೇಶ್ ಅವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿ ವರ್ಷ ಈ ಕಾರ್ಯಕ್ರಮ ರಾಜ್ಯದ ವಿವಿಧೆಡೆ ಅಗತ್ಯವಿರುವ ಸರಕಾರಿ ಶಾಲೆಗಳಲ್ಲಿ ನಿರಂತರವಾಗಿ ಮುಂದುವರಿಯಲಿದೆ ಎಂದರು.

ಈ ಸಂದರ್ಭ ಶಾಲೆಯ ಮಕ್ಕಳಿಗೆ ಅಗತ್ಯವಿರುವ ಶಾಲಾ ಪರಿಕರ ಹಾಗೂ ನೋಟ್ ಬುಕ್‌ಗಳನ್ನು ವಿತರಿಸಲಾಯಿತು. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೀಲಾ ನಂದೀಶ್, ಸರಕಾರಿ ಇಂಜಿನಿಯರಿAಗ್ ಕಾಲೇಜು ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಭಾಗದ ಉಪ ನಿರ್ದೇಶಕ ಪ್ರಸಾದ್ ಸಾಲಿಯಾನ್, ನಿವೃತ್ತ ಮುಖ್ಯೋಪಾಧ್ಯಾಯಿನಿ ಹೆಚ್.ಎಲ್. ಸೀತಮ್ಮ, ಶಾಲೆಯ ಮುಖ್ಯ ಶಿಕ್ಷಕಿ ರಮ್ಯಾ ರೈ, ದೈಹಿಕ ಶಿಕ್ಷಕಿ ಸುಮಾರಾಣಿ, ಉದ್ಯಮಿ ಇಂದ್ರೇಶ್ ಮಲ್ಲಪ್ಪ, ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್, ಉಪಾಧ್ಯಕ್ಷ ರಾಜು ರೈ, ದೈಹಿಕ ಶಿಕ್ಷಕಿ ಸ್ಟೆಲ್ಲಾ ಮೇರಿ, ಹರ್ಷಾಲಿ ಫೌಂಡೇಷನ್ ಪ್ರಮುಖರು ಮತ್ತು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸದಸ್ಯರು ಶಾಲಾ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಇದ್ದರು. ಮುಖ್ಯ ಶಿಕ್ಷಕಿ ರಮ್ಯ ರೈ ಸ್ವಾಗತಿಸಿ, ಶಿಕ್ಷಕ ಅರ್ಜುನ ಕಾರ್ಯಕ್ರಮ ನಿರೂಪಿಸಿ, ಪರಸಪ್ಪ ಶಿಕ್ಕೇರಿ ವಂದಿಸಿದರು.