ಕುಶಾಲನಗರ, ಜು. ೨: ದಶಕಗಳಿಂದ ಲೋಕಾರ್ಪಣೆಯಾಗದೆ ನೆನೆಗುದಿಗೆ ಬಿದ್ದಿರುವ ಕುಶಾಲನಗರದ ಕಲಾಭವನಕ್ಕೆ ಮರು ಜೀವ ಬಂದಿದ್ದು, ಹೆಚ್ಚುವರಿ ಅಭಿವೃದ್ಧಿ ಕೆಲಸಗಳಿಗೆ ರೂ ಒಂದು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಮಾಹಿತಿ ನೀಡಿದರು.
ಸಂಬAಧಿಸಿದ ಅಧಿಕಾರಿಗ ಳೊಂದಿಗೆ ಕಲಾಭವನ ಪರಿಶೀಲಿಸಿದ ಶಾಸಕರು ಬಾಕಿ ಉಳಿದಿರುವ ಕೆಲಸಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಕಲಾಭವನದ ಒಳಗೆ ಆಸನಗಳ ಅಳವಡಿಕೆ, ಲೈಟಿಂಗ್, ಸೌಂಡ್ಸ್, ಹೊರಾಂಗಣದಲ್ಲಿ ಇಂಟರ್ ಲಾಕ್ ನಿರ್ಮಾಣ, ಕ್ಯಾಂಟಿನ್ ಇತ್ಯಾದಿಗಳನ್ನು ಅನುಷ್ಠಾನಗೊಳಿಸಲು ಹೆಚ್ಚುವರಿ ಅನುದಾನದ ಕೊರತೆ ಎದುರಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರಸಕ್ತ ಬಿಡುಗಡೆಯಾಗಿರುವ ಅನುದಾನದಲ್ಲಿ ಒಳಾಂಗಣಕ್ಕೆ ಅಗತ್ಯವಾಗಿರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು. ಆಧುನಿಕ ಸುಸಜ್ಜಿತ ಉಪಕರಣಗಳನ್ನು ಅಳವಡಿಸಲು ಶಾಸಕ ಮಂತರ್ ಗೌಡ ಸೂಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಶಾಲನಗರದ ಹೃದಯ ಭಾಗದಲ್ಲಿ ಕಟ್ಟಡ ಪಾಳು ಬೀಳುತ್ತಿರುವುದು ವಿಷಾದದ ಸಂಗತಿ. ಹಲವು ಕಲಾಪ್ರೇಮಿಗಳ ಕಾರ್ಯಕ್ರಮಗಳಿಗೆ ಬಳಕೆಯಾಗಬೇಕಾದ ಕಲಾಭವನದ ಇಂದಿನ ಸ್ಥಿತಿ ಶೋಚನೀಯವಾಗಿದೆ. ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಎರಡು ಕೋಟಿ ಅನುದಾನದ ಪೈಕಿ ಪರಿಷ್ಕೃತ ಅಂದಾಜು ಪಟ್ಟಿ ಅನ್ವಯ ಇಲಾಖೆ ಸಚಿವ ಶಿವರಾಜ ತಂಗಡಗಿಯವರ ಮೂಲಕ ಒಂದು ಕೋಟಿ ರೂ. ಅನುದಾನ ಒದಗಿಸಿದ್ದಾರೆ. ಶೀಘ್ರವಾಗಿ ಒಳಾಂಗಣದಲ್ಲಿ ಅವಶ್ಯವಿರುವ ಕೆಲಸಗಳನ್ನು ಪೂರ್ಣಗೊಳಿಸಿ ನಂತರ ಹೊರಾಂಗಣ ಕಾಮಗಾರಿಗೆ ಬೇಕಾದ ಪ್ರಸ್ತಾವನೆ ಸಲ್ಲಿಸಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
(ಮೊದಲ ಪುಟದಿಂದ) ಈ ಸಂದರ್ಭ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಸದಸ್ಯ ಕೆ.ಆರ್.ಕಿರಣ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ವಕ್ತಾರ ನಟೇಶ್ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್, ನಿರ್ಮಿತಿ ಕೇಂದ್ರದ ಅಧಿಕಾರಿ ಸುಕೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಮಣಜೂರು ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ಜೋಸೆಫ್ ವಿಕ್ಟರ್ ಸೋನ್ಸ್, ಎಂ.ಕೆ.ದಿನೇಶ್, ಹರೀಶ್, ಜಗದೀಶ್ ರಂಜನ್, ರೋಷನ್, ಆದಂ, ರಮೇಶ್, ಪುರಸಭಾ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಅಭಿಯಂತರ ರಂಗರಾಮ್, ಮತ್ತಿತರರು ಇದ್ದರು.(ಮೊದಲ ಪುಟದಿಂದ) ಅಡಿ ಕಾಮಗಾರಿಯನ್ನು ಕೈಗೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಇದರೊಂದಿಗೆ ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿ ನಾಲ್ಕು ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಾಣ ಮಾಡಲು ಕೂಡ ಪ್ರಸ್ತಾವನೆ ಸಲ್ಲಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಶಾಸಕರು ಮತ್ತು ಅಧಿಕಾರಿಗಳು ಮಂಗಳವಾರ ಹಾರಂಗಿ ಅಣೆಕಟ್ಟು ಬಳಿ ಸ್ಥಳ ಪರಿಶೀಲನೆ ನಡೆಸಿದರು. ಅರ್ಧ ಎಕರೆ ಜಾಗವನ್ನು ಒದಗಿಸಿ ಮುಂದಿನ ಕ್ರಮ ಕೈಗೊಳ್ಳಲು ಅಣೆಕಟ್ಟು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.