ಕೂಡಿಗೆ, ಜು. ೨: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಸ್ತು ಬದ್ಧ ಜೀವನವನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ಶ್ರಮ, ಸಂಸ್ಕೃತಿಯ ಮಹತ್ವವನ್ನು ಅರಿತುಕೊಳ್ಳಲು ಎನ್ಎಸ್ಎಸ್ ಒಂದು ಉತ್ತಮ ವೇದಿಕೆಯಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ. ಸೀನಪ್ಪ ಅವರು ಅಭಿಪ್ರಾಯಿಸಿದರು.
ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ರಾಷ್ಟಿçÃಯ ಸ್ವಯಂ ಸೇವಾ ಯೋಜನಾ ಕೋಶ, ಕೊಡಗು ವಿಶ್ವವಿದ್ಯಾಲಯ, ಎನ್.ಎಸ್.ಎಸ್. ಪ್ರಾಂತೀಯ ಕೇಂದ್ರ, ಬೆಂಗಳೂರು ಎನ್.ಎಸ್.ಎಸ್. ರಾಜ್ಯ ಕೋಶ, ಇವರುಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಎನ್.ಎಸ್. ಎಸ್.ನಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಸಮಾಜ ಸೇವೆಯಂತಹ ಮಾನವೀಯ ಮೌಲ್ಯಗಳ ಪ್ರಜ್ಞೆ ಜಾಗೃತಗೊಳ್ಳುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾಲಯದ ರಾಷ್ಟಿçÃಯ ಸ್ವಯಂ ಸೇವಾ ಯೋಜನೆ ಕೋಶದ ಸಂಯೋಜಕಿ ಡಾ. ಗುಣಶ್ರೀ ಬಿ.ಎಸ್. ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಈ ಸಂದರ್ಭ ವಿವಿಧ ವಿಭಾಗದ ಉಪನ್ಯಾಸಕರು, ಸ್ನಾತಕೋತ್ತರ ವಿದ್ಯಾರ್ಥಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಜ್ಞಾನ ಕಾವೇರಿ ಆವರಣದಲ್ಲಿ ಸ್ವಚ್ಛತಾ ಶಿಬಿರದಲ್ಲಿ ಭಾಗವಹಿಸಿದರು.