ಕೂಡಿಗೆ, ಜು. ೨: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ದುಬಾರೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ತೂಗುಸೇತುವೆ ನಿರ್ಮಾಣಕ್ಕೆ ಸಂಬAಧಿಸಿದAತೆ ಕುಶಾಲನಗರ ವಲಯ ಅರಣ್ಯ ಇಲಾಖೆಯ ಮುಖೇನ ರಾಜ್ಯ ಸರ್ಕಾರಕ್ಕೆ ಮತ್ತು ಅರಣ್ಯ ಇಲಾಖೆಗೆ ತೂಗುಸೇತುವೆ ನಿರ್ಮಾಣಕ್ಕೆ ರೂ. ೬ ಕೋಟಿ ವೆಚ್ಚದ ಕಾಮಗಾರಿಯ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮಾಹಿತಿ ನೀಡಿದ್ದಾರೆ.

ರಾಷ್ಟç ಮತ್ತು ಅಂರ‍್ರಾಷ್ಟಿçÃಯ ಮಟ್ಟದಲ್ಲಿ ದುಬಾರೆ ಸಾಕಾನೆ ಶಿಬಿರವು ಗುರುತಿಸಲ್ಪಟಿದೆ. ದಿನಂಪ್ರತಿ ಸಾವಿರಾರು ಪ್ರವಾಸಿಗರು ಸಾಕಾನೆ ಶಿಬಿರಕ್ಕೂ ಭೇಟಿ ನೀಡಿ ಸಾಕಾನೆ ಸಫಾರಿಯಲ್ಲಿ ಪಾಲ್ಗೊಳ್ಳುತ್ತಾರೆ. ಅಲ್ಲದೆ ಬಹುದಿನಗಳ ಪ್ರಮುಖ ಬೇಡಿಕೆಯಾಗಿದ್ದ ತೂಗು ಸೇತುವೆ ನಿರ್ಮಾಣಕ್ಕೆ ಇದೀಗ ಅರಣ್ಯ ಇಲಾಖೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಶಾಸಕರು ಕೂಡಿಗೆಗೆ ಭೇಟಿ ನೀಡಿದ ಸಂದರ್ಭ ತಿಳಿಸಿದ್ದಾರೆ. ಇದಕ್ಕೆ ಸಂಬAಧಿಸಿ ದಂತೆ ಅರಣ್ಯ ಸಚಿವರೊಂದಿಗೆ ಚರ್ಚಿಸಿದ್ದು, ಬೇಕಾಗುವ ಅನುದಾನ ಒದಗಿಸುವ ಭರವಸೆ ಅರಣ್ಯ ಸಚಿವರು ನೀಡಿದ್ದಾರೆ ಎಂದರು.