ವೀರಾಜಪೇಟೆ, ಜು. ೨: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ೨೦೨೪-೨೦೨೯ ರ ಅವಧಿಗೆ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಂಘದ ಅಧ್ಯಕ್ಷ ಗುರುರಾಜ್ ಬಿ.ಎಸ್. ಅವರು, ಬೈಲಾದ ನಿಯಮದಂತೆ ಚುನಾವಣೆಯನ್ನು ನಡೆಸಲು ಎಲ್ಲಾ ಇಲಾಖೆಗಳಿಂದ ರಾಜ್ಯ ಸರ್ಕಾರಿ ನೌಕರರ ಮತದಾರರ ಕರಡು ಪಟ್ಟಿಯನ್ನು ಸಿದ್ದಪಡಿಸಿದ್ದು, ಪಟ್ಟಿಯನ್ನು ಸಂಘದ ವೀರಾಜಪೇಟೆ ಶಾಖೆಯಲ್ಲಿ ಸೂಚನ ಫಲಕದಲ್ಲಿ ಪ್ರಕಟಿಸಲಾಗಿದೆ.
ತಾ. ೨ ರಿಂದ ೭ ರತನಕ ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆಗಳನ್ನು ಸಲ್ಲಿಸಲು ಮುಕ್ತವಾದ ಅವಕಾಶವಿರುತ್ತದೆ ಎಂದು ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ಸಂಘದ ಕಾರ್ಯದರ್ಶಿ ದೇವರಾಜ್ ಬಿ.ಟಿ. (ಮೊ.ಸ.೯೭೩೯೫೭೦೮೦೬) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಕಾರ್ಯದರ್ಶಿ ಬಿ.ಟಿ. ದೇವರಾಜ್, ರಾಜ್ಯ ಪರಿಷತ್ ಸದಸ್ಯ ಸುರೇಂದ್ರ ಈ., ಖಜಾಂಚಿ ಲಲಿತಾ ಎ.ಬಿ. ಇದ್ದರು.