ಚೆಯ್ಯಂಡಾಣೆ, ಜು. ೨: ಮನೆಯ ಸಮೀಪದಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾ ಒಂದರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ನಡೆದಿದೆ.
ನಾಲಡಿ ವಾಟೆಕಾಡು ಗ್ರಾಮದ ನಿವಾಸಿ ದೇವಯ್ಯ ಮನೆ ಸಮೀಪದಲ್ಲಿ ಎಂದಿನAತೆ ಆಟೋ ರಿಕ್ಷಾವನ್ನು ನಿಲ್ಲಿಸಿ ಮನೆಗೆ ತೆರಳಿದ್ದರು. ಸೋಮವಾರ ಮಧ್ಯರಾತ್ರಿ ಗ್ರಾಮಕ್ಕೆ ಲಗ್ಗೆಯಿಟ್ಟ ಕಾಡಾನೆ ಆಟೋರಿಕ್ಷಾದ ಮೇಲೆ ದಾಳಿ ನಡೆಸಿದ ಪರಿಣಾಮ ಆಟೋರಿಕ್ಷಾಗೆ ಜಖಂಗೊAಡಿದೆ. ಅಲ್ಲದೆ ಗ್ರಾಮದ ತೋಟಗಳಲ್ಲಿ ದಾಂಧಲೆ ನಡೆಸಿದ ಕಾಡಾನೆ ಗ್ರಾಮದ ನಿವಾಸಿ ಕುಡಿಯರ ಅಮ್ಮವ್ವ, ದೇವಯ್ಯ, ಸರೋಜ ಎಂಬವರ ತೋಟದಲ್ಲಿ ಬೆಳೆದಿದ್ದ ಅಡಿಕೆ, ತೆಂಗು, ಬಾಳೆ, ಕಾಫಿ, ಗಿಡಗಳನ್ನು ತುಳಿದು ನಾಶಪಡಿಸಿದ್ದು, ಅಪಾರ ನಷ್ಟ ಸಂಭವಿಸಿದೆ. ಸಂಬAಧಪಟ್ಟ ಅರಣ್ಯ ಇಲಾಖೆ ಕಾಡಾನೆ ಹಾವಳಿ ತಡೆಗಟ್ಟಿ ನಷ್ಟ ಹೊಂದಿದವರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕಳೆದ ಕೆಲವು ತಿಂಗಳ ಹಿಂದೆ ಇದೇ ಗ್ರಾಮದ ನಿವಾಸಿ ರಾಜ ದೇವಯ್ಯ ಎಂಬವರು ಆನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದರು. ಅವರ ಮನೆಯ ಸಮೀಪವೇ ನನ್ನ ಮನೆ ಕೂಡ ಇದ್ದು, ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ಗ್ರಾಮಸ್ಥರು ನಡೆದಾಡಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ . ಸಂಬAಧಪಟ್ಟ ಅರಣ್ಯ ಇಲಾಖೆ ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ದೇವಯ್ಯ ಮನವಿ ಮಾಡಿದರು.
ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಉಪವಲಯ ಅರಣ್ಯಾಧಿಕಾರಿ ಫಿರೋಜ್ ಖಾನ್ ನಷ್ಟ ಹೊಂದಿದವರಿಗೆ ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ದೊರೆಯುವಂತೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭ ಅರಣ್ಯ ಇಲಾಖೆಯ ಸೋಮಣ್ಣ ಗೌಡ, ಕಾಳೇಗೌಡ, ಸಿಬ್ಬಂದಿಗಳಾದ ಮಂಜುನಾಥ್, ಕಾವೇರಪ್ಪ, ರಾಹುಲ್, ಕಾರ್ತಿಕ್, ಮುತ್ತಪ್ಪ ಹಾಗೂ ಗ್ರಾಮಸ್ಥರು ಇದ್ದರು.