ಮಡಿಕೇರಿ, ಜು. ೨: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕರವೇ ಕಾರ್ಯಕರ್ತರು ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬAಧ ಸಮಗ್ರ ಕಾಯ್ದೆ ರೂಪಿಸಬೇಕು. ಇತ್ತೀಚಿನ ದಿನಗಳಲ್ಲಿ ಇತರ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ಸಿಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಹಾಗಾಗಿ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ಗ್ರೂಪ್‌ನಲ್ಲಿ ಕನ್ನಡಿಗರಿಗೆ ಶೇ. ೧೦೦ ರಷ್ಟು ಮೀಸಲಾತಿ ನೀಡಬೇಕು. ಇತರ ಗ್ರೂಪ್‌ಗಳಲ್ಲಿ ಶೇ. ೮೦ ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎಸ್. ದೀಪಕ್, ಮಡಿಕೇರಿ ತಾಲೂಕು ಅಧ್ಯಕ್ಷ ಪ್ರದೀಪ್ ಕಿಶೋರ್, ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.