ವೀರಾಜಪೇಟೆ, ಜು, ೨: ವೀರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವ ಕಾರಣ ಕಾಳಜಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಬಗ್ಗೆ ಸೋಮವಾರ ಪುರಸಭೆ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.

ವೀರಾಜಪೇಟೆ ತಾಲೂಕು ತಹಶೀಲ್ದಾರ್ ಹೆಚ್.ಎನ್. ರಾಮಚಂದ್ರ ಸಭೆಯ ಅಧ್ಯಕ್ಷತೆ ವಹಿಸಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಸಲುವಾಗಿ ಅನುಸರಿಸಬೇಕಾದ ಕ್ರಮಗಳನ್ನು ಹಾಗೂ ಮಾಹಿತಿಗಳನ್ನು ನೀಡಿದರು.

ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಎ. ಚಂದ್ರಕುಮಾರ್, ನೋಡಲ್ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶಾಲಾ ಶಿಕ್ಷಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿ, ಚೆಸ್ಕಾಂ ಅಧಿಕಾರಿಗಳು ಹಾಜರಿದ್ದರು.