ಚೆಯ್ಯಂಡಾಣೆ, ಜು. ೨: ನರಿಯಂದಡ ಹಾಗೂ ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏರ್ಪಟ್ಟಿರುವ ಕಾಡಾನೆ ಹಾವಳಿ ಹಾಗೂ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ತಾ. ೧೦ರಂದು ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸುವುದಾಗಿ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್ ಅಚ್ಚಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನರಿಯಂದಡ, ಕೊಕೇರಿ, ಚೇಲಾವರ, ಕರಡ, ಅರಪಟ್ಟು, ಎಡಪಾಲ, ಮರಂದೋಡ, ಕುಂಜಿಲ, ಕಕ್ಕಬೆ ವ್ಯಾಪ್ತಿಯಲ್ಲಿ ಕಾಡಾನೆ ನಿರಂತರ ತೋಟಗಳಲ್ಲಿ ಬೀಡುಬಿಟ್ಟು ದಾಳಿ ನಡೆಸುತ್ತಿದೆ. ನಿರಂತರ ವಿದ್ಯುತ್ ಸಮಸ್ಯೆಯಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚೆಯ್ಯಂಡಾಣೆ ಪಟ್ಟಣದ ಹೃದಯ ಭಾಗದ ನಾಪೋಕ್ಲು-ವೀರಾಜಪೇಟೆ ಮುಖ್ಯ ರಸ್ತೆಯಲ್ಲಿ ಗ್ರಾಮಸ್ಥರಿಂದ ಪ್ರತಿಭಟನೆ ಮತ್ತು ರಸ್ತೆ ತಡೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.