ನಾಪೋಕ್ಲು, ಜು. ೨: ಕೊಡಗು ಜಿಲ್ಲಾ ಪೊಲೀಸ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಮೂರ್ನಾಡು ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಹಾಗೂ ಎನ್ಸಿಸಿ ಘಟಕದ ವತಿಯಿಂದ ಅಂರ್ರಾಷ್ಟಿçÃಯ ಮಾದಕ ದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು.
ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಾದಕ ದ್ರವ್ಯ ವಿರೋಧಿ ಘೋಷಣೆಯನ್ನು ಕೂಗುತ್ತಾ ಪದವಿಪೂರ್ವ ಕಾಲೇಜಿನಿಂದ ಮೂರ್ನಾಡು ಪಟ್ಟಣದಲ್ಲಿ ಜಾಥಾ ನಡೆಸಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಮೂರ್ನಾಡು ಪಟ್ಟಣದಲ್ಲಿ ಕಲಾವೇದಿಕೆ ಕುಶಾಲನಗರ ತಂಡ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಬೀದಿನಾಟಕ ಪ್ರದರ್ಶಿಸಿತು.
ವಿದ್ಯಾರ್ಥಿಗಳಿಗೆ ಮೂರ್ನಾಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಉಮೇಶ್ ಉಪ್ಪಳಿಕೆ ಪ್ರತಿಜ್ಞಾವಿಧಿ ಬೋಧಿಸಿದರು. ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಮಯಂತಿ, ಎನ್ಸಿಸಿ ಆಫೀಸರ್ ಕಾವೇರಪ್ಪ, ಪ್ರಾಂಶುಪಾಲೆ ದೇವಕಿ, ಉಪನ್ಯಾಸಕಿ ರೋಹಿಣಿ, ಶಿಕ್ಷಕಿ ಉಷಾ ಹಾಗೂ ರಶ್ಮಿ ಉಪಸ್ಥಿತರಿದ್ದರು.