ಸೋಮವಾರಪೇಟೆ, ಜು. ೨: ತಾಲೂಕು ಒಕ್ಕಲಿಗರ ಸಂಘದ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಅಂರ್ರಾಷ್ಟಿçÃಯ ಮಾದಕ ದ್ರವ್ಯ ವಿರೋಧಿ ಮತ್ತು ಅಕ್ರಮ ಕಳ್ಳ ಸಾಗಾಣೆ ವಿರೋಧಿ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಮಿಲ್ಡೆçÃಡ್ ಗೋನ್ಸಾಲ್ವೇಸ್ ವಹಿಸಿ ಮಾತನಾಡಿ, ಮಾದಕ ದ್ರವ್ಯ ವ್ಯಸನ ಮತ್ತು ಕಳ್ಳ ಸಾಗಾಣಿಕೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.
ಪೊಲೀಸ್ ಸಬ್ಇನ್ಸ್ಪೆಕ್ಟರ್ ಗೋಪಾಲ್ ಅವರು, ಮಾದಕ ದ್ರವ್ಯ ಬಳಕೆಯಿಂದಾಗುವ ದುಷ್ಪರಿಣಾಮ ಮತ್ತು ಸರಬರಾಜು ಮಾಡುವವರ ವಿರುದ್ಧ ಕೈಗೊಳ್ಳಲಾಗುವ ಕಾನೂನು ಕ್ರಮಗಳ ಬಗ್ಗೆ ತಿಳಿಸಿದರು.
ವೇದಿಕೆಯಲ್ಲಿ ಎ.ಎಸ್.ಐ. ಕಾಳಿಯಪ್ಪ, ಸಿಬ್ಬಂದಿಗಳಾದ ವೀಣಾ ಮತ್ತು ಲೋಕೇಶ್, ಕಾಲೇಜಿನ ಉಪನ್ಯಾಸಕರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಇದೇ ಸಂದರ್ಭ ಪೊಲೀಸ್ ಮುಖ್ಯ ಪೇದೆ ವೀಣಾ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.