ನಾಪೋಕ್ಲು, ಜು. ೩: ಕಾವೇರಿ ರಿವರ್ ಸೇವಾ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿ ವೃದ್ಧಿ ಯೋಜನೆ, ಕರ್ನಾಟಕ ಜನಜಾಗೃತಿ ವೇದಿಕೆ, ಶೌರ್ಯ ತಂಡ ಸಂಯುಕ್ತ ಆಶ್ರಯದಲ್ಲಿ ನಮಾಮಿ ಕಾವೇರಿ ಯೋಜನೆಗೆ ತಲಕಾವೇರಿ ಕ್ಷೇತ್ರದಲ್ಲಿ ಸಂಕಲ್ಪ ಮಾಡುವ ಮೂಲಕ ಚಾಲನೆ ನೀಡಲಾಯಿತು.
ಕಾವೇರಿ ನದಿ ಸಂರಕ್ಷಣೆಯ ನಿಟ್ಟಿನಲ್ಲಿ ನೇರವಾಗಿ ನದಿ ಕಲುಷಿತವಾಗುವುದನ್ನು ತಪ್ಪಿಸುವ ಸಂಬAಧ ನದಿ ತಟದ ಜನರಿಗೆ ನದಿ ಸಂರಕ್ಷಣೆಯ ಬಗ್ಗೆ ಅರಿವು, ಜಾಗೃತಿ ಮೂಡಿಸುವ ಯೋಜನೆ ಇದಾಗಿದ್ದು, ಬುಧವಾರ ಕ್ಷೇತ್ರದಲ್ಲಿ ಸಂಕಲ್ಪ ಮಾಡುವ ಮೂಲಕ ಭಾಗಮಂಡಲ, ನಾಪೋಕ್ಲು ವ್ಯಾಪ್ತಿಯಲ್ಲಿ ಗ್ರಾಮ ಮಟ್ಟದಲ್ಲಿ ನಮಾಮಿ ಕಾವೇರಿ ತಂಡಗಳನ್ನು ರಚಿಸಲಾಯಿತು.
ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಜೀವನದಿ ಕಾವೇರಿ ಇತ್ತೀಚಿನ ದಿನಗಳಲ್ಲಿ ಹಲವಾರು ರೀತಿಯಲ್ಲಿ ಕಲುಷಿತಗೊಳ್ಳುವ ಮೂಲಕ ತನ್ನ ಮೂಲ ಅಸ್ತಿತ್ವವನ್ನು ಕಳೆದುಕೊಳ್ಳುವಂತಾಗಿದೆ. ಈ ಸಂಬAಧ ಸ್ಥಳೀಯರ ಪಾಲ್ಗೊಳ್ಳುವಿಕೆ ಮೂಲಕ ನದಿಯ ಸಂರಕ್ಷಣೆಗಾಗಿ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದೊಂದಿಗೆ ಗ್ರಾಮಮಟ್ಟದ ತಂಡಗಳನ್ನು ರಚಿಸುವ ಚಿಂತನೆ ಹೊಂದಲಾಗಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಮಾತನಾಡಿ, ದಕ್ಷಿಣ ಕನ್ನಡದಲ್ಲಿ ನೇತ್ರಾವತಿ ನದಿಯ ಸಂರಕ್ಷಣೆಗಾಗಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಶ್ರೀ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿಗಳ ಸೂಚನೆಯಂತೆ ಈಗಾಗಲೇ ಸ್ವಚ್ಛತಾ ಕಾರ್ಯಕ್ರಮಗಳು ನಡೆಯುತ್ತಿವೆ. ಜೀವನದಿ ಕಾವೇರಿ ಬಗ್ಗೆ ಕೂಡ ಕಾಳಜಿ ಹೊಂದಿರುವ ಡಾ. ವೀರೇಂದ್ರ ಹೆಗ್ಗಡೆ ಅವರ ಸೂಚನೆ ಮೇರೆಗೆ ಕೊಡಗು ಜಿಲ್ಲೆಯಲ್ಲಿ ತಲಕಾವೇರಿಯಿಂದ ರಾಮನಾಥಪುರ ತನಕ ನದಿ ತಟದ ಸಂರಕ್ಷಣೆಯ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸ ನಡೆಯಲಿದೆ ಎಂದು ಹೇಳಿದ್ದಾರೆ.
ಈ ಸಂಬAಧ ಭಾಗಮಂಡಲ ವಿಎಸ್ಎಸ್ಎನ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಸತೀಶ್ ಜೋಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಸ್ಥಿತರಿದ್ದ ಕಾರ್ಯಕರ್ತರೊಂದಿಗೆ ಚರ್ಚಿಸಿ ಸ್ವಚ್ಛ ಕಾವೇರಿಯ ಗುರಿ ಯೊಂದಿಗೆ ನಮಾಮಿ ಕಾವೇರಿ ತಂಡಗಳನ್ನು ಆಯ್ಕೆ ಮಾಡಲಾಯಿತು. ಈ ಸಮಿತಿಗಳು ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಮುಖರ ನೇತೃತ್ವದಲ್ಲಿ ಸ್ವಚ್ಛ ಕಾವೇರಿಗಾಗಿ ನಮಾಮಿ ಕಾವೇರಿ ಮೂಲಕ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಎಂದರು.
ಈ ಸಂದರ್ಭ ಭಾಗಮಂಡಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗಂಗಮ್ಮ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ, ತಾಲೂಕು ಯೋಜನಾಧಿಕಾರಿ ಪುರುಷೋತ್ತಮ್, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಕಾವೇರಿ ರಿವರ್ ಸೇವಾ ಟ್ರಸ್ಟ್ ನಿರ್ದೇಶಕ ಕೃಷ್ಣಮೂರ್ತಿ ಭಟ್, ಸಂಘದ ಮೇಲ್ವಿಚಾರಕ ಸುನಿಲ್ ಕುಮಾರ್, ಸೇವಾ ಪ್ರತಿನಿಧಿ ವೆಂಕಟರಮಣ ಇದ್ದರು.
ಇದೇ ಸಂದರ್ಭ ಸಂಗಮದಲ್ಲಿ ಕಾವೇರಿ ನದಿಗೆ ವಿಶೇಷ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಹಿರಿಯ ಅರ್ಚಕರು ಕಾವೇರಿ ರಿವರ್ ಸೇವಾ ಟ್ರಸ್ಟ್ನ ಕೃಷ್ಣಮೂರ್ತಿ ಭಟ್ ಆರತಿ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ನದಿ ಸ್ವಚ್ಛತಾ ಸಮಿತಿ ಪ್ರಮುಖರಿಗೆ ಎಲ್ಲಾ ರೀತಿಯ ಸಹಯೋಗ ನೀಡಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭ ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರತೀಪ ಬಿ.ಎಂ., ತಾಲೂಕು ಯೋಜನಾಧಿಕಾರಿ ಪುರುಷೋತ್ತಮ್, ಮೇಲ್ವಿಚಾರಕ ಸುನಿಲ್ ಕುಮಾರ್, ಶೌರ್ಯ ತಾಲೂಕು ಮಾಸ್ಟರ್ ಬಾಳೆಯಡ ದಿವ್ಯ, ಒಕ್ಕೂಟ ಅಧ್ಯಕ್ಷ ಅಜಿತಾ, ಸೇವಾ ಪ್ರತಿನಿಧಿ ಚಂದ್ರಕಲಾ, ಉಮಾಲಕ್ಷ್ಮಿ, ಆಶಾಲತಾ, ಅಜಿತ, ಶ್ರೀ ಕಿರಣ್ ಸಂಘದ ಸದಸ್ಯರು, ಶೌರ್ಯ ಸ್ವಯಂ ಸೇವಕರು ಮತ್ತಿತರರು ಇದ್ದರು.
ಕಾರ್ಯಕ್ರಮಗಳಲ್ಲಿ ನಮಾಮಿ ಕಾವೇರಿ ತಂಡಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ನಾಪೋಕ್ಲು ಚೆರಿಯಪರಂಬು ಕಾವೇರಿ ನದಿ ತಟದಲ್ಲಿ ಮಹಾ ಆರತಿ ಕಾರ್ಯಕ್ರಮ ಹಾಗೂ ಸ್ಥಳೀಯ ಸ್ಮಶಾನದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.