ಸೋಮವಾರಪೇಟೆ, ಜು. ೩: ತಾಲೂಕಿನ ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಪುಷ್ಪಗಿರಿ ಬೆಟ್ಟಶ್ರೇಣಿ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗು ತ್ತಿರುವುದರಿಂದ ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಮಲ್ಲಳ್ಳಿ ಜಲಪಾತ ದಿನದಿಂದ ದಿನಕ್ಕೆ ತನ್ನ ಸೌಂದರ್ಯ ವನ್ನು ದ್ವಿಗುಣಗೊಳಿಸಿಕೊಂಡು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ತನ್ನತ್ತ ಕರೆಯುತ್ತಿದೆ.
ಮುಂಗಾರಿನ ವಿಳಂಬದಿAದಾಗಿ ಈಗಷ್ಟೇ ತನ್ನ ಸೌಂದರ್ಯವನ್ನು ಇಮ್ಮಡಿಸಿಕೊಳ್ಳುತ್ತಿರುವ ಮಲ್ಲಳ್ಳಿ ಜಲಧಾರೆಯನ್ನು ನೋಡಲು ಸಾವಿರಾರು ಮಂದಿ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದು, ಪ್ರಾಕೃತಿಕ ಸೌಂದರ್ಯಕ್ಕೆ ಮಾರು ಹೋಗುತ್ತಿದ್ದಾರೆ.
ನಿಸರ್ಗ ರಮಣೀಯತೆಯನ್ನು ತನ್ನೊಡಲಲ್ಲಿರಿಸಿಕೊಂಡಿರುವ ಪುಷ್ಪಗಿರಿ ಬೆಟ್ಟತಪ್ಪಲಿನಲ್ಲಿ ಹುಟ್ಟುವ ಕುಮಾರಧಾರಾ ನದಿ, ಮಲ್ಲಳ್ಳಿ ಗ್ರಾಮದ ಬೃಹತ್ ಕಲ್ಲುಬಂಡೆಯಿAದ ಕೆಳಭಾಗಕ್ಕೆ ಭೋರ್ಗರೆಯುತ್ತಾ ಧುಮುಕಿ ಜಲಧಾರೆಯಾಗಿ ಪ್ರವಹಿಸುವ ದೃಶ್ಯ ಮನಮೋಹಕವಾಗಿದೆ. ಜಲಪಾತದಲ್ಲಿ ನಡೆಯುವ ಅವಘಡಗಳನ್ನು ತಪ್ಪಿಸಲು ನೀರಿನೊಳಗೆ ಯಾರೂ ಇಳಿಯದಂತೆ ಪೊಲೀಸ್ ಇಲಾಖೆಯಿಂದ ಬ್ಯಾರಿಕೇಡ್ ಅಳವಡಿಸಲಾಗಿದೆ.
ಜಲಪಾತದ ಮೇಲ್ಭಾಗದಲ್ಲಿರುವ ಬೃಹತ್ ಗಾತ್ರದ ಕಲ್ಲುಗಳು ಅತ್ಯಂತ ಆಕರ್ಷಣೀಯ ಸ್ಥಳವಾಗಿದ್ದು, ಇಲ್ಲಿ ನಿಂತು ಜಲಪಾತದ ಸೌಂದರ್ಯವನ್ನು ಕಣ್ಮುಂಬಿಕೊಳ್ಳುತ್ತಾ ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಜಲಪಾತದ ಅಂದವನ್ನು ಸೆರೆಹಿಡಿದು ಪ್ರವಾಸಿಗರು ಸಂಭ್ರಮಿಸುತ್ತಿದ್ದಾರೆ. ಗೆಳೆಯರೊಂದಿಗೆ ಸೆಲ್ಫಿ ತೆಗೆದುಕೊಂಡು ಪ್ರಕೃತಿ ಸೌಂದರ್ಯಕ್ಕೆ ಮಾರುಹೋಗುತ್ತಿದ್ದಾರೆ.
ಕೊಡಗು ಸೇರಿದಂತೆ ಹೊರ ಜಿಲ್ಲೆಗಳ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವದು ವಿಶೇಷವಾಗಿದೆ. ರಾಜಧಾನಿ ಬೆಂಗಳೂರಿನಿAದಲೇ ಅತಿ ಹೆಚ್ಚು ಪ್ರವಾಸಿಗರು ಇಲ್ಲಿಗೆ ಆಗಮಿಸು ತ್ತಿರುವುದು ಜಲಪಾತದ ಆಕರ್ಷಣೀಯ ಸೌಂದರ್ಯಕ್ಕೆ ಸಾಕ್ಷಿಯಾಗಿದೆ.
ಪ್ರವಾಸಿಗರ ರಕ್ಷಣೆ, ಮಾಹಿತಿಗಾಗಿ ಇಲಾಖೆಯಿಂದ ಪ್ರವಾಸಿ ಮಿತ್ರರನ್ನು ಇಲ್ಲಿಗೆ ನಿಯೋಜಿಸಲಾಗಿದ್ದು, ಇವರು ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರ ಮಾಹಿತಿ, ಮೊಬೈಲ್ ನಂಬರ್ಗಳನ್ನು ನಮೂದಿಸಿ ಕೊಳ್ಳುವ ಮೂಲಕ ಜಲಪಾತದ ಬಗ್ಗೆ ಮಾಹಿತಿಯನ್ನೂ ನೀಡುತ್ತಿದ್ದಾರೆ. ಜಲಪಾತದ ಬಳಿಗೆ ಮದ್ಯವನ್ನು ಕೊಂಡೊಯ್ಯದAತೆ, ನೀರಿಗೆ ಇಳಿಯದಂತೆ, ಅಪಾಯ ಕಾರಿ ಸ್ಥಳಗಳತ್ತ ತೆರಳದಂತೆ ಎಚ್ಚರಿಕೆಯನ್ನು ನೀಡುತ್ತಾರೆ.
ಮಲ್ಲಳ್ಳಿ ಜಲಪಾತದವರೆಗೂ ಕಾಂಕ್ರಿಟ್ ರಸ್ತೆ ನಿರ್ಮಾಣವಾಗಿದ್ದು, ಜಲಪಾತದ ತಳಭಾಗದವರೆಗೂ ಮೆಟ್ಟಿಲುಗಳನ್ನು ನಿರ್ಮಿಸಲಾಗಿದೆ. ಹಾಲ್ನೊರೆಯಂತಹ ನೀರಿನ ವೈಭವ.., ಜುಳುಜುಳು ನಾದದೊಂದಿಗೆ ಹೃನ್ಮನ ತಣಿಸುವ ಪ್ರವಾಸಿಗರ ಸ್ವರ್ಗ-ಸೌಂದರ್ಯದ ಖನಿ ಮಲ್ಲಳ್ಳಿ ಜಲಪಾತ ಮೈದುಂಬಿಕೊAಡಿದೆ.
- ವಿಜಯ್ ಹಾನಗಲ್