ಮಡಿಕೇರಿ, ಜು. ೩: ಸೋಮವಾರಪೇಟೆ ಚೇಂಬರ್ ಆಫ್ ಕಾಮರ್ಸ್ ೨೦೨೨-೨೪ನೇ ವಾರ್ಷಿಕ ಮಹಾಸಭೆ ತಾ.೬ರಂದು ಅಲ್ಲಿನ ಮಾನಸ ಹಾಲ್‌ನಲ್ಲಿ ಸಂಜೆ ೬ ಗಂಟೆಗೆ ನಡೆಯಲಿದೆ. ಚೇಂಬರ್ ಅಧ್ಯಕ್ಷ ಜಿ.ಕೆ. ಧನುರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಚೇಂಬರ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಶ್ರೀನಿವಾಸ್, ಸೋಮವಾರಪೇಟೆ ವೃತ್ತ ನಿರೀಕ್ಷಕ ಮುದ್ದು ಮಹದೇವ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಕೆ. ನಾಚಪ್ಪ ಉಪಸ್ಥಿತರಿರುವರು. ಇದೇ ಸಂದರ್ಭ ಉದ್ಯಮಿಗಳಾದ ರಾಮೇಗೌಡರು, ಬಿ.ಎಸ್. ಮಂಜುನಾಥ್, ಬಿ.ಆರ್. ಪ್ರಮೋದ್ ಅವರುಗಳನ್ನು ಸನ್ಮಾನಿಸಲಾಗುವುದು.