ಮಡಿಕೇರಿ, ಜು. ೩: ಮಡಿಕೇರಿ-ಮಂಗಳೂರು ರಸ್ತೆಯ ದೇವರಕೊಲ್ಲಿ ಬಳಿ ರಸ್ತೆಗಡ್ಡಲಾಗಿ ಭಾರೀ ಗಾತ್ರದ ಮರ ಉರುಳಿ ಬಿದ್ದು ಕೆಲ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಇಂದು ಸಂಜೆ ೫ ಗಂಟೆ ಸಮಯದಲ್ಲಿ ಮರ ರಸ್ತೆಗುರುಳಿದ್ದು, ಸುಮಾರು ಒಂದು ಗಂಟೆಗಳ ಕಾಲ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಚೆಸ್ಕಾಂ ಸಿಬ್ಬಂದಿಗಳ ಸಹಕಾರದೊಂದಿಗೆ ಮರ ತೆರವುಗೊಳಿಸಿದ ಬಳಿಕ ರಸ್ತೆ ಸಂಚಾರ ಸುಗಮವಾಯಿತು.