*ಗೋಣಿಕೊಪ್ಪ, ಜು. ೩: ಮಾಧ್ಯಮ ಮತ್ತು ಆಡಳಿತ ವ್ಯವಸ್ಥೆಯಿಂದ ಸಮಾಜದ ಅಭಿವೃದ್ದಿ ಕಾಣಬಹುದು ಎಂದು ಪೊನ್ನಂಪೇಟೆ ತಹಶೀಲ್ದಾರ್ ಕೆ.ಎನ್. ಮೋಹನ್ಕುಮಾರ್ ಹೇಳಿದರು.
ಕುಕೂನ್ ಸಭಾಂಗಣದಲ್ಲಿ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಮತ್ತು ಪ್ರಶಸ್ತಿ ಪ್ರದಾನ, ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಮಾಧ್ಯಮದಿಂದ ಸಮಾಜವನ್ನು ತಿದ್ದುವ ಕಾರ್ಯ ನಡೆಯುತ್ತಿದೆ. ಸರ್ಕಾರದ ಯಾವುದೇ ಕಾರ್ಯಕ್ರಮ ಗಳು ಜನರಿಗೆ ತಲುಪಲು ಮಾಧ್ಯಮದ ಕೊಡುಗೆ ಹೆಚ್ಚಿದೆ ಎಂದರು. ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಮಾತನಾಡಿ, ಗ್ರಾಮಾಭಿವೃದ್ಧಿಯಲ್ಲಿ ಮಾಧ್ಯಮದ ಕೊಡುಗೆ ಅಪಾರ ಎಂದರು.
ಪ್ರಶಸ್ತಿ ಪ್ರದಾನ: ರಾಷ್ಟಿçÃಯ ಸಮಿತಿ ಸದಸ್ಯರಾಗಿದ್ದ ಎಸ್.ಎ. ಮುರುಳೀಧರ್ ಸಹೋದರ ಗಣೇಶ್ ಜ್ಞಾಪಕಾರ್ಥ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಯನ್ನು ಅಣ್ಣೀರ ಹರೀಶ್ ಮಾದಪ್ಪ, ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ತಮ್ಮ ಸೋದರ ಮಾವಂದಿರಾದ ದೇಯಂಡ ಪೂಣಚ್ಚ ಹಾಗೂ ಉಮೇಶ್ ಜ್ಞಾಪಕಾರ್ಥದ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿಯನ್ನು ಎಂ.ಎA. ಚನ್ನನಾಯಕ ಹಾಗೂ ಹೆಚ್.ಕೆ. ಜಗದೀಶ್, ವೀರಾಜಪೇಟೆ ತಾಲೂಕು ಸಂಘದ ಅಧ್ಯಕ್ಷರಾಗಿದ್ದ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರು ತಂದೆ ಸಣ್ಣುವಂಡ ಮಾದಪ್ಪ ಹಾಗೂ ತಾಯಿ ಜಾನಕಿ ಮಾದಪ್ಪ ಜ್ಞಾಪಕಾರ್ಥ ಸ್ಥಾಪಿಸಿದ್ದ ಪರಿಸರ ಕುರಿತ ವರದಿ ಪ್ರಶಸ್ತಿಯನ್ನು ಜಗದೀಶ್ ಜೋಡುಬೀಟಿ ಅವರಿಗೆ ಪ್ರದಾನ ಮಾಡಲಾಯಿತು.
ಕರ್ನಾಟಕ ರಾಜ್ಯಕಾರ್ಯನಿರತ ಪತ್ರಕರ್ತರ ಸಂಘದ ೨೦೨೨ ನೇ ಸಾಲಿನ ಜಿ. ನಾರಾಯಣ ಸ್ವಾಮಿ ಜ್ಞಾಪಕಾರ್ಥದ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ ಪಡೆದ ಸಣ್ಣುವಂಡ ಕಿಶೋರ್ ನಾಚಪ್ಪ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ರಾಜ್ಯದಲ್ಲಿ ಉತ್ತಮ ಸಂಘ ಪ್ರಶಸ್ತಿ ಪಡೆದಿರುವ ಪೊನ್ನಂಪೇಟೆ ತಾಲೂಕು ಸಂಘ ರಾಜ್ಯಕ್ಕೆ ಮಾದರಿಯಾಗಿದೆ. ಇದು ಜಿಲ್ಲೆಗೆ ಹೆಮ್ಮೆಯ ವಿಚಾರ ಎಂದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಮಾತನಾಡಿ, ಸದಸ್ಯರು ಒಂದಾಗಿ ಸಂಘವನ್ನು ಮುನ್ನಡೆಸಬೇಕಿದೆ ಎಂದರು. ರಾಜ್ಯ ಸಮಿತಿ ಸದಸ್ಯ ಟಿ.ಎನ್. ಮಂಜುನಾಥ್ ಸಂಘದ ಚಟುವಟಿಕೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ವೀಕ್ಷಕರಾಗಿ ಆಗಮಿಸಿದ ಜಿಲ್ಲಾ ಉಪಾಧ್ಯಕ್ಷ ಪಳೆಯಂಡ ಪಾರ್ಥ ಚಿಣ್ಣಪ್ಪ ಸಮನ್ವಯದಿಂದ ಸಂಘದ ಏಳಿಗೆ ಸಾಧ್ಯ ಎಂದರು.
ಪೊನ್ನAಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಅಧ್ಯö್ಯಕ್ಷತೆಯಲ್ಲಿ ಸಭೆ ನಡೆಯಿತು. ರಾಜ್ಯ ಪುರಸ್ಕಾರಕ್ಕೆ ಸಹಭಾಗಿತ್ವದ ಕೊಡುಗೆ ನೀಡಿದ ಸದಸ್ಯರು ಮಾದರಿ ಎಂದರು. ಪ್ರಧಾನ ಕಾರ್ಯದರ್ಶಿ ಎನ್. ಎನ್. ದಿನೇಶ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ಮಂಡೇಡ ಅಶೋಕ್ ವಾರ್ಷಿಕ ವರದಿ ಮತ್ತು ಮಹಾಸಭೆ ವರದಿ ವಾಚಿಸಿದರು. ಖಜಾಂಚಿ ವಿ. ವಿ. ಅರುಣ್ಕುಮಾರ್ ಲೆಕ್ಕಪತ್ರ ಮಂಡಿಸಿದರು.
ಸಿಂಗಿ ಸತೀಶ್ ಸ್ವಾಗತಿಸಿದರು. ಉಪಾಧ್ಯಕ್ಷ ಮಚ್ಚಮಾಡ ಅನೀಶ್ ಮಾದಪ್ಪ, ನಿರ್ದೇಶಕರಾದ ಚಿಮ್ಮಣಮಾಡ ದರ್ಶನ್ ದೇವಯ್ಯ ಇದ್ದರು.