ಮಡಿಕೇರಿ, ಜು. ೪: ರಾಷ್ಟಿçÃಯ ವೈದ್ಯರ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯರಾದ ಅನಿಲ್ ದವಾನ್ಗೆ ಉತ್ತಮ ವೈದ್ಯ ಪ್ರಶಸ್ತಿ ನೀಡಲಾಯಿತು.
ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವ ರು ಪ್ರಶಸ್ತಿ ಪ್ರದಾನ ಮಾಡಿದರು. ಇವರು ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಚಿಕಿತ್ಸಕರಾಗಿ ಈ ಹಿಂದೆ ಸೇವೆ ಸಲ್ಲಿಸಿದ್ದು, ಪ್ರಸ್ತುತ ಕೊಡಗು ಮತ್ತು ಹಾಸನ ಜಿಲ್ಲೆಯ ಆಹಾರ ಮತ್ತು ಗುಣಮಟ್ಟದ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.