ಮಡಿಕೇರಿ, ಜು. ೪: ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸಾಧನೆ ತೋರಿದ ಸಮುದಾಯದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಪ್ರಮುಖರು ಮಾಹಿತಿ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ವಿ.ಎಂ. ವಿಜಯನ್, ತಾ ೭ ರಂದು ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಸಮಿತಿ ಅಧೀನದಲ್ಲಿ ಜಿಲ್ಲೆಯ ೯ ಮಲಯಾಳಿ ಸಮುದಾಯದ ಸಂಘಗಳು ಒಳಪಟ್ಟಿವೆ. ಪ್ರತಿ ಸಂಘದಿAದ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿ ತಲಾ ೨ ವಿದ್ಯಾರ್ಥಿಗಳಂತೆ ಒಟ್ಟು ೩೬ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹ ಧನ ವಿತರಿಸಲಾಗುವುದು. ಉನ್ನತ ಶಿಕ್ಷಣದಲ್ಲಿ ಸಾಧನೆ ತೋರಿದವರನ್ನು, ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡಿದವರು ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಯದುವೀರ್ ಒಡೆಯರ್ ಅವರನ್ನು ಆಹ್ವಾನಿಸಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಜಿಲ್ಲಾಧ್ಯಕ್ಷ ವಿ.ಎಂ. ವಿಜಯನ್ ಅಧ್ಯಕ್ಷತೆ ವಹಿಸಲಿದ್ದಾರೆ. ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಯುದುವೀರ ಕೃಷ್ಣದತ್ತ ನ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಮಾಜಿ ಶಾಸಕರುಗಳಾದ ಕೆ.ಜಿ. ಬೋಪಯ್ಯ ಹಿಂದೂ ಮಲಯಾಳಿ ಸಮಾಜದ ಸ್ಥಾಪಕಾಧ್ಯಕ್ಷ ಕೆ.ಎಸ್. ರಮೇಶ್, ಎಸ್.ಎನ್.ಡಿ.ಪಿ. ಕೊಡಗು ಯೂನಿಯನ್ ಅಧ್ಯಕ್ಷ ವಿ.ಕೆ. ಲೋಕೇಶ್, ನಾಯರ್ ಸರ್ವಿಸ್ ಸೊಸೈಟಿ ಅಧ್ಯಕ್ಷ ಕೆ.ಕೆ. ಹರೀಶ್ ಕುಮಾರ್, ಎಸ್‌ಎನ್‌ಡಿಪಿ ಮಡಿಕೇರಿ ಅಧ್ಯಕ್ಷ ಟಿ.ಆರ್. ವಾಸುದೇವ್, ಹಿಂದೂ ಮಲಯಾಳಿ ಸಮಾಜದ ಉಪಾಧ್ಯಕ್ಷ ಟಿ.ಕೆ. ಸುಧೀರ್, ಕಾರ್ಯದಶಿ ಪಿ.ಕೆ. ಶಶಿಕುಮಾರ್, ಖಜಾಂಚಿ ಕೆ. ಬಾಬು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಮಹಾಸಭೆ

ಸನ್ಮಾನ ಕಾರ್ಯಕ್ರಮದ ನಂತರ ಸಮಾಜದ ವಾರ್ಷಿಕ ಮಹಾಸಭೆ ಮಧ್ಯಾಹ್ನ ೩ ಗಂಟೆಗೆ ಸಂಘದ ಅಧ್ಯಕ್ಷ ವಿ.ಎಂ. ವಿಜಯ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಇದೇ ಸಂದರ್ಭ ಹೊಸ ಆಡಳಿತ ಮಂಡಳಿ ಆಯ್ಕೆ ನಡೆಸಲಾಗುತ್ತದೆ ಎಂದು ಉಪಾಧ್ಯಕ್ಷ ಟಿ.ಕೆ. ಸುಧೀರ್ ತಿಳಿಸಿದರು.

ಗೋಷ್ಠಿಯಲ್ಲಿ ಪ್ರಧಾನ ಸಲಹೆೆಗಾರÀ ಟಿ.ಆರ್. ವಾಸುದೇವ್, ಸ್ಥಾಪಕಾಧ್ಯಕ್ಷ ಕೆ.ಎಸ್. ರಮೇಶ್, ಖಜಾಂಚಿ ಕೆ. ಬಾಬು ಇದ್ದರು.