ಮಡಿಕೇರಿ, ಜು. ೪: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ (ಪಿಯುಸಿ ಮತ್ತು ಪಿ.ಯು. ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಡಿಕೇರಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ಹಾಗೂ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ (ಪಿಯುಸಿ ಮತ್ತು ಪಿಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಕ್ಕೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ೨೦೨೪-೨೫ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಿಸುವ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-೧, ಪ.ಜಾ/ಪ.ವರ್ಗ ರೂ. ೧ ಲಕ್ಷ ಹಾಗೂ ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ಮತ್ತು ಇತರೆ ರೂ.೪೪,೫೦೦ ಆಗಿರುತ್ತದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಿಸುವ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-೧ ಪ.ಜಾ/ಪ.ವರ್ಗ ರೂ.೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ಮತ್ತು ಇತರೆ ರೂ.೧ ಲಕ್ಷ ಆಗಿರುತ್ತದೆ.
ಅರ್ಜಿಯನ್ನು hಣಣಠಿ://shಠಿ.ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ ನಲ್ಲಿ ಸಲ್ಲಿಸುವುದು, ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ ೧೦ ಕೊನೆಯ ದಿನವಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ ೨೦ ಕೊನೆಯ ದಿನವಾಗಿದೆ. ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ/ನ್ನು ನೋಡಬಹುದು. ತಾಂತ್ರಿಕ ತೊಂದರೆಗಳಾದಲ್ಲಿ bಛಿತಿheಟಠಿಟiಟಿe@gmಚಿiಟ.ಛಿom ಇ-ಮೇಲ್ ಮುಖಾಂತರ ದಾಖಲೆಗಳೊಂದಿಗೆ ಕೋರಿಕೆಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ೮೦೫೦೭೭೦೦೦೪ ಮತ್ತು ೮೦೫೦೭೭೦೦೦೫ ಹಾಗೂ ಮೊಬೈಲ್ ಸಂಖ್ಯೆ ೮೭೬೨೪೭೬೭೯೦ನ್ನು ಸಂಪರ್ಕಿಸಬಹುದು ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌAಡು ಹತ್ತಿರ, ಮಡಿಕೇರಿ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.