ಮಡಿಕೇರಿ: ಸಂತ ಮೈಕಲರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು.
ಸಂತ ಮೈಕಲರ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಂಜಯ್ಕುಮಾರ್ ಎಫ್. ಮಾತನಾಡಿ, ಪರಸ್ಪರ ಪ್ರೀತಿಯಿಂದ ಕಾಣುವುದು, ಗುರು-ಹಿರಿಯರನ್ನು ಗೌರವಿಸುವುದು ಮುಂತಾದ ಉತ್ತಮ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೆಂಪೇಗೌಡರ ಕುರಿತಾದ ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಕೆ.ಎಸ್. ಸುಮಂತ್, ಮುಖ್ಯೋಪಾಧ್ಯಾಯ ಕೆ.ಎ. ಜಾನ್ಸನ್, ಮುಖ್ಯೋಪಾಧ್ಯಾಯಿನಿಯರಾದ ಸರಿತಾ, ಸಿಸಿಲಿಯಾ ಉಪಸ್ಥಿತರಿದ್ದರು.
ಉಪನ್ಯಾಸಕಿ ವಿಲ್ಮ ಡಿಸೋಜ, ಸರಿತಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲ ಕೆ.ಎಸ್. ಸುಮಂತ್ ಸ್ವಾಗತಿಸಿ, ಉಪನ್ಯಾಸಕಿ ಶ್ವೇತಾ ರುಮಾಲೆ ವಂದಿಸಿದರು.
ಲೇಖನಿ ಸಾಮಗ್ರಿ ವಿತರಣೆ ಐಗೂರು: ಸರಕಾರಿ ಶಾಲೆಗಳಲ್ಲಿ ಬಡವರ್ಗದ ವಿದ್ಯಾರ್ಥಿಗಳು ಹೆಚ್ಚಾಗಿ ವ್ಯಾಸಂಗ ಮಾಡುತ್ತಿದ್ದು, ಅಂತಹ ಶಾಲೆಗಳಿಗೆ ಗ್ರಾಮಸ್ಥರು ತಮ್ಮ ಕೈಲಾದ ಸಹಾಯಗಳನ್ನು ಮಾಡಬೇಕೆಂದು ಮಾದಾಪುರ ಗ್ರಾ.ಪಂ. ಸದಸ್ಯ ಅಂತೋಣಿ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಸ್ಥಳೀಯ ಮಾದಾಪುರ ಸರಕಾರಿ ಪ್ರಾಥಮಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ಅವರು ವಿತರಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು, ಮುಖ್ಯ ಶಿಕ್ಷಕರು, ಅಧ್ಯಾಪಕ ವೃಂದ, ಅಡುಗೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನೋಟ್ ಪುಸ್ತಕ ವಿತರಣೆ