ಮಡಿಕೇರಿ, ಜು. ೪: ಕೊಡಗು ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ ಮಳೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ಅತಿವೃಷ್ಟಿಯಿಂದ ಪ್ರಾಕೃತಿಕ ಅವಘಡ ಗಳು ಸಂಭವಿಸಿದಲ್ಲಿ ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸದಾ ಸನ್ನದ್ಧ ರಾಗಿರಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬAಧ ಗುರುವಾರ ನಡೆದ ಸಭೆಯಲ್ಲಿ ಅವರು ಮಾತ ನಾಡಿದರು. ಕಳೆದ ಬಾರಿಗೆ ಹೋಲಿಸಿ ದರೆ ಈ ಬಾರಿ ಉತ್ತಮ ಮಳೆಯಾಗು ತ್ತಿದ್ದು, ಕೆರೆಕಟ್ಟೆ, ತೊರೆ ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ದಿಸೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಯ ಕಡೆ ಹೆಚ್ಚಿನ ಗಮನಹರಿಸಬೇಕು.
ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಈಗಾಗಲೇ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ವಾರಕ್ಕೊಮ್ಮೆಯಾದರೂ ತಮ್ಮ ಹೋಬಳಿ ವ್ಯಾಪ್ತಿಗೆ ಭೇಟಿ ನೀಡಿ ಪ್ರಾಕೃತಿಕ ವಿಕೋಪ ಸಂಬAಧ ಮಾಹಿತಿ ಪಡೆಯು ವುದರ ಜೊತೆಗೆ, ಹೆಚ್ಚಿನ ಮಳೆಯಾದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಸೂಚಿಸಿದರು.
ತಹಶೀಲ್ದಾರರು ತಮ್ಮ ತಾಲೂಕು ವ್ಯಾಪ್ತಿಯಲ್ಲಿ ಮಳೆ ಸಂಬAಧಿಸಿದAತೆ ಸ್ಥಳೀಯ ಮಟ್ಟದಲ್ಲಿ ಹವಾಮಾನ ಮುನ್ಸೂಚನೆ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಹಂಚಿಕೊಳ್ಳಬೇಕು. ತಮ್ಮ ಹಾಗೂ ತಾಪಂ. ಇಒ ಹಂತದಲ್ಲಿ ತಾಲೂಕು ಮಟ್ಟದಲ್ಲಿ ಸಭೆ ನಡೆಸಬೇಕು. ಹಾಗೆಯೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸಹ ಸಭೆಗಳನ್ನು ಮಾಡಿ ಪ್ರಾಕೃತಿಕ ವಿಕೋಪ ಎದುರಿಸಲು ಸನ್ನದ್ಧರಾಗಬೇಕು.
ಹೆಚ್ಚಿನ ಮಳೆಯಾದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆಗೆ ಸಂಬAಧಿಸಿ ದಂತೆ ಡಿಡಿಪಿಐ ಅವರಿಗೆ ಮಾಹಿತಿ ನೀಡಬೇಕು. ಡಿಡಿಪಿಐ ಅವರು ರಜೆ ಘೋಷಣೆ ಸಂಬAಧ ಜಿಲ್ಲಾ ಮಟ್ಟದಲ್ಲಿ ಅಗತ್ಯ ಕ್ರಮವಹಿಸಬೇಕು.
ಪ್ರಾಕೃತಿಕ ವಿಕೋಪ ಎದುರಿಸುವ ಸಂಬAಧ ಎನ್ಡಿಆರ್ಎಫ್, ಪೊಲೀಸ್, ಅಗ್ನಿಶಾಮಕ ಇತರರ ಜೊತೆಗೂಡಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ಪ್ರಾತ್ಯಕ್ಷಿಕೆ ಏರ್ಪಡಿಸುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು. ಅತಿವೃಷ್ಟಿ ಉಂಟಾದ ಸಂದರ್ಭದಲ್ಲಿ ಎಚ್ಚರವಹಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಅತಿವೃಷ್ಟಿ ಉಂಟಾಗದಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವ ಸಂಬAಧ ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.
ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರೀತಿಯ ಮುನ್ನೆಚ್ಚ ರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಸಂದರ್ಭದಲ್ಲಿ ಯಾವ ರೀತಿ ಕ್ರಮಕೈ ಗೊಳ್ಳಬೇಕು ಎಂಬ ಮಾಹಿತಿ ಇರ ಬೇಕು. ಅಂತಹ ಸಮಯದಲ್ಲಿ ಹೆಚ್ಚಿನ ಅರಿವು ಪ್ರತಿಯೊಬ್ಬರಲ್ಲಿಯೂ ಇರಬೇಕು.
ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಯಾವುದೇ ರೀತಿಯ ಜೀವ ಹಾನಿಯಾಗದಂತೆ ಎಚ್ಚರವಹಿಸಬೇಕು. ಯಾವುದೇ ರೀತಿಯ ಅವಘಡಗಳು ಸಂಭವಿಸದAತೆ ಸದಾ ಎಚ್ಚರ ವಹಿಸಬೇಕು. ಈ ಬಗ್ಗೆ ಜಲಾ ಶಯಗಳು, ನದಿಗಳಿಗೆ ಯಾರೂ ಸಹ ತೆರಳದಂತೆ ನೋಡಿಕೊಳ್ಳಬೇಕು.
ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಅಂತಹ ಸಂದರ್ಭ ಯಾವುದೇ ರೀತಿಯ ಅವಘಡಗಳು ಸಂಭವಿಸಿದAತೆ ಎಚ್ಚರ ವಹಿಸಬೇಕು. ಮಾಹಿತಿ ಫಲಕ ಅಳವಡಿಸಬೇಕು ಎಂದು ಹೇಳಿದರು.
ಕಳೆದ ೨೦೧೮ರಿಂದ ಮೂರು ವರ್ಷದ ಅವಧಿಯಲ್ಲಿ ಆಗಸ್ಟ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕು. ಕರೆ ಮಾಡಿದಾಗ ಸ್ವೀಕರಿಸಬೇಕು. ಸಾರ್ವಜನಿಕರಿಗೆ ಅಧಿಕಾರಿಗಳು ಸ್ಪಂದಿಸಬೇಕು. ಜೊತೆಗೆ ತಹಶೀಲ್ದಾರರು ಕಾಲ ಕಾಲಕ್ಕೆ ಮಾಹಿತಿ ನೀಡುವುದು ಸಹ ಅತೀ ಮುಖ್ಯವಾಗಿದೆ.
ರಸ್ತೆ ಬದಿಗೆ ಮರ ಹಾಗೂ ವಿದ್ಯುತ್ ಕಂಬ ಬಿದ್ದಲ್ಲಿ ಸಕಾಲದಲ್ಲಿ ತೆರವುಗೊಳಿಸುತ್ತಿದ್ದಾರೆ. ಹಾಗೆಯೇ ಬರೆ ಕುಸಿತ ಉಂಟಾದಲ್ಲಿ ಮಣ್ಣು ತೆರವು ಗೊಳಿಸುವ ಕಾರ್ಯವನ್ನು ಸಂಬAಧ ಪಟ್ಟ ಇಲಾಖೆ ಅಧಿಕಾರಿಗಳು ನಿರ್ವಹಿಸುತ್ತಿದ್ದು, ಮುಂದಿನ ದಿನಗಳ ಲ್ಲಿಯೂ ಹೆಚ್ಚಿನ ಮಳೆಯಾದಲ್ಲಿ ಸಾರಿಗೆ ಸಂಪರ್ಕ ಮತ್ತಿತರ ವ್ಯತ್ಯಯಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸುವ ಕಾರ್ಯವಾಗಬೇಕು. ಸಾರ್ವಜನಿಕ ರಿಂದ ದೂರು ಬರದಂತೆ ಎಚ್ಚರವಹಿಸ ಬೇಕು. ಜಿಲ್ಲೆಯಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆ ಜುಲೈ ಅಂತ್ಯದೊಳಗೆ ಕಂದಾಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಇದೇ ಸಂದರ್ಭ ತಿಳಿಸಿದರು.
ಜಿ.ಪಂ. ಸಿಇಒ ವರ್ಣಿತ್ ನೇಗಿ ಕೆಡಿಪಿ ಸಭೆಗೆ ಸಿದ್ಧತೆ ಕೈಗೊಂಡಿರುವ ಸಂಬAಧ ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಪ ವಿಭಾಗಾಧಿಕಾರಿ ವಿನಾ ಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿ ಕಾರಿ ಬಿ.ಎನ್. ವೀಣಾ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.