ಮಡಿಕೇರಿ, ಜು. ೪: ಕನ್ನಡಸಿರಿ ಸ್ನೇಹಬಳಗ, ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಸಾಹಿತಿ ದಿ.ಡಾ.ಜಿ.ಟಿ. ನಾರಾಯಣ ಅವರ ಬದುಕು ಬರಹ ವಿಚಾರಮಂಡನೆ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

ತಾ. ೫ ರಂದು ಬೆಳಿಗ್ಗೆ ೧೦.೩೦ಕ್ಕೆ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ನಗರಸಭಾ ಸದಸ್ಯ ಕೆ.ಎಸ್. ರಮೇಶ್ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಿಗ್ಗಾಲು ಗಿರೀಶ್ ಬರೆದ ‘ಕಳೆದುಕೊಂಡವನು ಮತ್ತು ಇನ್ನಿತರ ಕಥೆಗಳು’ ಪುಸ್ತಕವನ್ನು ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ ಬಿಡುಗಡೆಗೊಳಿಸಲಿದ್ದು, ನಾರಾಯಣ ಅವರ ಬದುಕು - ಬರಹ ಕುರಿತು ಜಯಲಕ್ಷಿö್ಮ ಶೇಖರ್ ವಿಚಾರ ಮಂಡಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ‘ಶಕಿ’್ತ ಉಪಸಂಪಾದಕ ಕುಡೆಕಲ್ ಸಂತೋಷ್, ವಿಶೇಷ ಆಹ್ವಾನಿತರಾಗಿ ಸಾಹಿತಿ ಕಿಗ್ಗಾಲು ಗಿರೀಶ್ ಪಾಲ್ಗೊಳ್ಳಲಿದ್ದಾರೆ ಎಂದು ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.