ಮಡಿಕೇರಿ, ಜು. ೪: ಜನನ-ಮರಣ ಪ್ರಮಾಣ ಪತ್ರಕ್ಕಾಗಿ ಗ್ರಾಮೀಣ ಭಾಗದ ಜನರಿಗೆ ಅನುಕೂಲಕರವಾಗುವ ಉದ್ದೇಶದಿಂದ ಆಯಾ ಗ್ರಾಮ ಪಂಚಾಯಿತಿಗಳ ಕಾರ್ಯದರ್ಶಿಗಳನ್ನೇ ಜನನ-ಮರಣ ಉಪನೋಂದಣಾಧಿಕಾರಿಗಳಾಗಿ ರಾಜ್ಯ ಸರಕಾರದ ಪಂಚಾಯತ್ ರಾಜ್ ಇಲಾಖೆ ನೇಮಿಸಿ ಆದೇಶಿಸಿದ್ದು, ಜುಲೈ ೧ ರಿಂದಲೇ ಹೊಸ ಆದೇಶದನ್ವಯ ಜನನ-ಮರಣ ನೋಂದಣಿಯನ್ನು ಪಂಚಾಯಿತಿಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಪ್ರಾರಂಭಿಸಲಾಗಿದೆ. ಇದಕ್ಕಾಗಿ ಪಂಚಾಯಿತಿಗಳ ಕಾರ್ಯದರ್ಶಿಗಳಿಗೆ ತರಬೇತಿಯನ್ನು ನೀಡಲಾಗಿದ್ದು, ನೋಂದಣಿ ಪ್ರಕ್ರಿಯೆ ನಡೆಸಲು ಅವರುಗಳು ಡಿಜಿಟಲ್ ಸಿಗ್ನೇಚರ್ ಸರ್ಟಿಫಿಕೇಟ್ಗಳನ್ನು ಪಡೆದುಕೊಂಡಿದ್ದಾರೆ. ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಅವರ ನಿರ್ದೇಶನದಂತೆ ಜುಲೈ ಒಂದರಿAದಲೇ ಪಂಚಾಯಿತಿಗಳ ಕಾರ್ಯದರ್ಶಿಗಳು ಜನನ-ಮರಣ ಉಪ ನೋಂದಣಾಧಿಕಾರಿಯಾಗಿಯೂ ಕೆಲಸ ನಿರ್ವಹಿಸಲು ಪ್ರಾರಂಭಿಸುವAತೆ ಸೂಚನೆ ನೀಡಲಾಗಿದೆ.
ಕಾರ್ಯದರ್ಶಿಗಳ ಹುದ್ದೆ ಖಾಲಿಯಿಡದಂತೆ ಕ್ರಮ
ಪ್ರತೀ ಜಿಲ್ಲಾ ಪಂಚಾಯಿತಿಯಿAದ ಎಲ್ಲಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಡಿಜಿಟಲ್ ಸಿಗ್ನೇಚರ್ ಸರ್ಟಿಫಿಕೇಟ್ಗಳನ್ನು ಪಡೆದಿರುವುದಾಗಿ ಮಾಹಿತಿ ದೊರಕಿದೆ. ನೂತನ ವ್ಯವಸ್ಥೆಯಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸುವ ಸಲುವಾಗಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ಹುದ್ದೆಗಳನ್ನು ಖಾಲಿ ಇಡದಂತೆ ಕ್ರಮವಹಿಸಲು ಸೂಚಿಸಲಾಗಿದೆ. ಹುದ್ದೆ ಖಾಲಿಯಿದ್ದಲ್ಲಿ ಗ್ರಾಮ ಪಂಚಾಯಿತಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು/ಅಕ್ಕ ಪಕ್ಕದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ಪ್ರಬಾರ ಹುದ್ದೆಗಳನ್ನು ನೀಡಿ ಯಾವುದೇ ಕಾರಣಕ್ಕೂ ಹುದ್ದೆ ಖಾಲಿ ಇರದಂತೆ ಖಾತರಿಪಡಿಸಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಕನ್ನಡ/ಆಂಗ್ಲ ಭಾಷೆಗಳಲ್ಲಿ ಜನನ, ಮರಣ ಉಪ ನೋಂದಣಾಧಿಕಾರಿಗಳ ಕಾರ್ಯಾಲಯದ ಹೆಸರು ಮತ್ತು ಕಛೇರಿಯ ವೇಳೆಯನ್ನು ಸ್ಪಷ್ಟವಾಗಿ ನಮೂದಿಸಿದ ನಾಮ ಫಲಕವನ್ನು ಅಳವಡಿಸುವಂತೆಯೂ ನಿರ್ದೇಶನ ನೀಡಲಾಗಿದೆ.