ಪೊನ್ನಂಪೇಟೆ, ಜು. ೬: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗ ಪೋಷಕರು ಹಾಗೂ ಶಿಕ್ಷಕರ ಸಭೆ ನಡೆಯಿತು. ಈ ಸಂದರ್ಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಎಸ್.ಡಿ.ಎಂ.ಸಿ ಸಮಿತಿ ಅಧ್ಯಕ್ಷ ಸಿ.ಎ. ಜುನೈದ್ ಮಾತನಾಡಿ, ಪೋಷಕರು ಮಕ್ಕಳ ಸ್ವಚ್ಛತೆಯ ಕಡೆಗೆ ಹೆಚ್ಚು ಗಮನವಹಿಸಬೇಕು. ತಮ್ಮ ಮಕ್ಕಳ ಶಿಸ್ತು ಹಾಗೂ ಕಲಿಕೆಯ ಬಗ್ಗೆ ಮಾಹಿತಿ ಪಡೆಯಲು ಪೋಷಕರು ಶಿಕ್ಷಕರೊಂದಿಗೆ ನಿಕಟ ಸಂಪರ್ಕ ಇಟ್ಟುಕೊಳ್ಳಬೇಕು. ಸಮಸ್ಯೆ ಏನಾದರೂ ಕಂಡುಬAದರೆ ಮುಖ್ಯ ಶಿಕ್ಷಕರ, ತರಗತಿ ಶಿಕ್ಷಕರ ಅಥವಾ ಎಸ್.ಡಿ.ಎಂ.ಸಿ. ಸದಸ್ಯರಿಗೆ ತಿಳಿಸಬೇಕು ಎಂದು ಹೇಳಿದರು.
ಮುಖ್ಯ ಶಿಕ್ಷಕ ಬಿ.ಎಂ. ವಿಜಯ್ ಮಾತನಾಡಿ, ಶಿಥಿಲಾವಸ್ಥೆಗೊಂಡಿದ್ದ ಶಾಲೆಯ ಹಳೆಯ ಕಟ್ಟಡ ನೆಲಸಮಗೊಳಿಸುವ ಕಾರ್ಯ ಪೂರ್ಣಗೊಂಡಿದ್ದು, ಹೊಸ ಕಟ್ಟಡ ನಿರ್ಮಿಸಲು ಶಾಸಕÀ ಪೊನ್ನಣ್ಣನವರಿಗೆ ಮನವಿ ಸಲ್ಲಿಸಿದ ಮೇರೆಗೆ ಶಾಸಕರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿರುವ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಶಾಲೆಯಲ್ಲಿ ಪ್ರತಿ ತಿಂಗಳ ಒಂದು ಶನಿವಾರದಂದು ಶನಿವಾರ ಸಂಭ್ರಮ (ಬ್ಯಾಗ್ ಲೇಸ್ ಡೇ) ಚಟುವಟಿಕೆ ಯನ್ನು ಸರ್ಕಾರದ ಆದೇಶದಂತೆ ನಡೆಸುವ ಬಗ್ಗೆ ಮಾಹಿತಿ ನೀಡಿದರು.
ಶಿಕ್ಷಕಿ ಐ.ಎಂ. ರೋಜಿ ಮಾತನಾಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ರಾಮಕೃಷ್ಣ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ನಾಗವೇಣಿ, ಸದಸ್ಯರಾದ ಲಲಿತ, ಮಂಜುಳ, ಕನ್ಯಾಕುಮಾರಿ, ಸುಜೀನ, ಪ್ರಮೀಳ ಹಾಗೂ ಶಿಕ್ಷಕವೃಂದ ಹಾಜರಿದ್ದರು. ಅಧಿಕ ಸಂಖ್ಯೆಯಲ್ಲಿ ಪೋಷಕರು ಸಭೆಗೆ ಆಗಮಿಸಿ ಶಾಲೆಯ ಅಭಿವೃದ್ಧಿ ಮತ್ತು ಮಕ್ಕಳ ಕಲಿಕೆ ಹಾಗೂ ಸುರಕ್ಷೆ, ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿ ಊಟದ ಬಗ್ಗೆ ಮಾಹಿತಿ ಪಡೆದುಕೊಂಡರು.