ಸಂಪಾಜೆ: ಸಂಪಾಜೆ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಸಾಧನೆಗೈದ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ಸರ್ಕಾರದ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧನಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಜಿ. ರಾಜಾರಾಮ್ ನೆರವೇರಿಸಿದರು.

ನೂತನವಾಗಿ ಆಯ್ಕೆಯಾದ ಕಾಲೇಜಿನ ವಿದ್ಯಾರ್ಥಿ ಸರ್ಕಾರದ ಪ್ರತಿನಿಧಿಗಳಿಗೆ ಪ್ರಮಾಣವಚನವನ್ನು ಬೋಧಿಸಲಾಯಿತು. ಸಮಾಜ ವಿಜ್ಞಾನ ಶಿಕ್ಷಕ ಹೆಚ್.ಜಿ. ಕುಮಾರ್ ಪ್ರಮಾಣವಚನವನ್ನು ಬೋಧಿಸಿದರು. ಶಾಲಾ ನಾಯಕಿಯಾಗಿ ದ್ವಿತೀಯ ಪಿಯುಸಿಯ ಸುಶ್ಮಿತಾ, ಶಾಲಾ ಉಪನಾಯಕನಾಗಿ ಹತ್ತನೇ ತರಗತಿಯ ದೀನ್‌ರಾಜ್, ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿಯ ಧನ್ಯಶ್ರೀ, ಉಪ ಕಾರ್ಯದರ್ಶಿಯಾಗಿ ಹತ್ತನೇ ತರಗತಿಯ ಬಿಂದ್ಯಾ, ವಿದ್ಯಾರ್ಥಿಗಳ ಚುನಾವಣೆ ಮೂಲಕ ಆಯ್ಕೆಗೊಂಡರು. ಇದಲ್ಲದೆ ವಿವಿಧ ಖಾತೆಗಳ ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿರೋಧ ಪಕ್ಷದ ಸದಸ್ಯರುಗಳು ಕೂಡ ಆಯ್ಕೆಯಾದರು.

೨೦೨೩-೨೪ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕವನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು ಗಳಿಸಿದ ಹಿತಾಶ್ರೀ, ದ್ವಿತೀಯ ಸ್ಥಾನ ಗಳಿಸಿದ ಶಶಾಂತ್ ಹಾಗೂ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ ಖದಿಜತ್ ರಂಜೀನಾ, ದ್ವಿತೀಯ ಸ್ಥಾನಗಳಿಸಿದ ಚಸ್ಮಿತ ಮತ್ತು ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಚರಿಷ್ಮಾ ದ್ವಿತೀಯ ಸ್ಥಾನವನ್ನು ಪಡೆದ ಅಪ್ರಾಜ್‌ಗೆ ಸನ್ಮಾನಿಸಿ, ಅಭಿನಂದಿಸಲಾಯಿತು.ಐಗೂರು: ಮಾದಾಪುರ ಮಾದರಿ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮಹಾರಾಜ ಬಸ್ ನಿರ್ವಾಹಕ ಯತೀಶ್ ಮತ್ತು ಅವರ ಸಹೋದರ ನವೀನ್ ಉಚಿತವಾಗಿ ಬ್ಯಾಗ್‌ಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಮಂಜಯ್ಯ, ಶಿಕ್ಷಕರ ವೃಂದ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆÀ್ಷ ನೆಬಿಸ, ಉಪಾಧ್ಯಕ್ಷ ಮನು ಕುಮಾರ್ ಮತ್ತು ಸದಸ್ಯರು ಉಪಸ್ಥಿತರಿದ್ದರು.ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತç ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ವಹಿಸಿ ಮಾತನಾಡಿ, ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿ, ಈ ಯುಗದಲ್ಲಿ ಖಾಸಗಿ ಶಾಲೆಗಳಲ್ಲಿ ದೊರೆಯುವ ಶಿಕ್ಷಣ ಸರಕಾರಿ ಶಾಲೆಯಲ್ಲೂ ದೊರೆಯುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ವಿದ್ಯಾಭ್ಯಾಸದಿಂದ ವಂಚಿತರಾಗದAತೆ ಕಿವಿಮಾತು ಹೇಳಿದರು.

ಈ ಸಂದರ್ಭ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ರತ್ನಾ, ಮುಖ್ಯ ಶಿಕ್ಷಕಿ ಹೆಚ್.ಆರ್. ಪ್ರೇಮಾಕುಮಾರಿ, ಸಹ ಶಿಕ್ಷಕರಾದ ದಮಯಂತಿ, ಪೂರ್ಣೇಶ್, ಜಯಪ್ರದ, ಅತಿಥಿ ಶಿಕ್ಷಕಿ ಸತ್ಯಮ್ಮ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕೂಡಿಗೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನಶೀಲತೆಯನ್ನು ಮೈಗೂಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಸಲಹೆ ನೀಡಿದರು.

ಸಮೀಪದ ಕೂಡಿಗೆ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು ಶಿಕ್ಷಣದಿಂದ ಮಾತ್ರ ಮುಂದಿನ ಭವಿಷ್ಯ ಉತ್ತಮ ಪಡಿಸಿಕೊಳ್ಳಲು ಸಾಧ್ಯ ಎಂದರು. ನಿವೃತ್ತ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿ, ಹರಪಳ್ಳಿ ರವೀಂದ್ರ ಅವರ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎನ್. ಪುಷ್ಪಾ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ನಿವೃತ್ತ ಪ್ರಾಂಶುಪಾಲ ಶ್ರೀನಿವಾಸ್, ಶಿಕ್ಷಕರಾದ ಸೋಮಯ್ಯ, ಕುಸುಮ, ಕಾವ್ಯ, ಸುರೇಶ್ ಮುಖಂಡರಾದ ಎಂ.ಎ. ಖಾಸಿಂ ಮಾದಾಪುರ, ಬಸಪ್ಪ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.ಪೊನ್ನಂಪೇಟೆ: ಹಾತೂರು ಗ್ರಾಮದ ನಿವಾಸಿ ಹಾಕಿ ತರಬೇತುದಾರ ವಿ.ಎಸ್. ರಾಮಚಂದ್ರ ಹಾಗೂ ಅವರ ಪುತ್ರ ಒಲಂಪಿಯನ್ ವಿ.ಆರ್. ರಘುನಾಥ್ ಅವರು ಹಾಕಿ ಕ್ರೀಡೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಹಾತೂರು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ೨೦ ಹಾಕಿಸ್ಟಿಕ್, ೧೨ ಬಾಕ್ಸ್ ಬಾಲ್, ಶಿನ್ ಗಾರ್ಡ್, ಬಿಪ್ಸ್ ಸೇರಿದಂತೆ ಒಟ್ಟು ೧ ಲಕ್ಷ ರೂಪಾಯಿ ಮೌಲ್ಯದ ಕ್ರೀಡಾ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಆಡಳಿತ ಮಂಡಳಿಯವರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.