ಮಡಿಕೇರಿ, ಜು.೧೨: ಸಾರ್ವಜನಿಕರ ಕುಂದುಕೊರತೆಯನ್ನು ಶೀಘ್ರ ಪರಿಹರಿಸುವಲ್ಲಿ ಆಯಾಯ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
ಆ ನಿಟ್ಟಿನಲ್ಲಿ ಈ ಬಾರಿ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದAತೆ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ತಾ. ೧೩ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಜನಸ್ಪಂದನ ಸಭೆ ನಡೆಯಲಿದೆ. ಸಾರ್ವಜನಿಕರು ಈ ಅವಕಾಶ ಬಳಸಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಕೋರಿದ್ದಾರೆ.