ಸುಂಟಿಕೊಪ್ಪ, ಜು. ೧೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಂಟಿಕೊಪ್ಪ ವಲಯದ ಕಾನ್‌ಬೈಲ್ ಕಾರ್ಯಕ್ಷೇತ್ರದ ಶ್ರೀಬಸವೇಶ್ವರ ದೇವಸ್ಥಾನಕ್ಕೆ ಸಹಾಯಧನದ ಡಿ.ಡಿ.ಯನ್ನು ವಿತರಿಸಿದರು. ನಾಕೂರು-ಶಿರಂಗಾಲ ಶ್ರೀಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ವತಿಯಿಂದ ರೂ. ೧.೫೦ ಲಕ್ಷಗಳನ್ನು ಸುಂಟಿಕೊಪ್ಪ ವಲಯದ ಕಾನ್‌ಬೈಲ್ ಕಾರ್ಯಕ್ಷೇತ್ರದ ಮೂಲಕ ಜಿಲ್ಲಾ ನಿರ್ದೇಶಕಿ ಲೀಲಾವತಿ, ತಾಲೂಕು ಯೋಜನಾಧಿಕಾರಿ ಪುರುಷೋತ್ತಮ್, ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ಎನ್. ಧರ್ಮಪ್ಪ ಡಿ.ಡಿ. ಹಸ್ತಾಂತರಿಸಿದರು. ಈ ಸಂದರ್ಭ ನಾಕೂರು-ಶಿರಂಗಾಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನರ್, ಕಾನ್‌ಬೈಲ್ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಹಾಗೂ ಒಕ್ಕೂಟದ ಅಧ್ಯಕ್ಷೆ ಭವ್ಯ, ಸಹ ಕಾರ್ಯದರ್ಶಿ ಅರ್ಚನಾ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬ್ಯಾಂಕಿನ ನಿರ್ದೇಶಕ ಕೆ.ಆರ್. ಮಂಜುನಾಥ್, ರಾಮಯ್ಯ, ಬ್ರಿಜೇಶ್, ಸಿ.ಡಿ. ಗಣೇಶ್, ದಿಲೀಪ್, ಪಂಚಾಕ್ಷರಿ, ಚಿದ್ದು, ಶಿವಕುಮಾರ್, ವಸಂತ, ವಿವೇಕ್, ಜಿ.ಪಂ. ಮಾಜಿ ಸದಸ್ಯೆ ಕುಮುದಾ ಧರ್ಮಪ್ಪ ಹಾಗೂ ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.