ಮಡಿಕೇರಿ, ಜು. ೧೨: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ೨೦೦೨ರ ನವೆಂಬರ್ ೪ ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಮಹಿಳಾ ಸಾಂತ್ವನ ಕೇಂದ್ರ ಪ್ರಾರಂಭಗೊAಡಿದೆ.

ಈ ಸಂಸ್ಥೆ ಮೂಲಕ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ.

ಸಾಂತ್ವನ ಕೇಂದ್ರದಲ್ಲಿ ಈವರೆಗೆ ೫,೧೮೨ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, ೫,೧೬೮ ಪ್ರಕರಣಗಳು ಇತ್ಯರ್ಥಗೊಂಡಿರುತ್ತವೆ. ೨೦೨೪-೨೫ನೇ ಆರ್ಥಿಕ ಸಾಲಿನಲ್ಲಿ ೬೫ ಪ್ರಕರಣಗಳು ದಾಖಲಾಗಿ ೫೪ ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ ೧೪ ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತವೆ.

ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು ರೂ. ೫೫ ಸಾವಿರಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ ೨೦೨೪-೨೫ನೇ ಸಾಲಿನಲ್ಲಿ ಪರಿಹಾರ ಕೊಡಿಸಿಕೊಡಲಾಗಿದೆ.

ಆ ದಿಸೆಯಲ್ಲಿ ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷ ಕೆ.ಎಸ್. ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್ ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ. ೯೮೮೦೯೮೫೯೩೯ (ಕಚೇರಿ)ನ್ನು ಸಂಪರ್ಕಿಸಬಹುದು ಎಂದು ಸಾಂತ್ವನ ಕೌಟುಂಬಿಕ ಸಲಹಾ ಕೇಂದ್ರದ ಅಧ್ಯಕ್ಷರು ತಿಳಿಸಿದ್ದಾರೆ.